Ad imageAd image

ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ಮರುನಾಮಕರಣ, ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ: ಸಿಎಂ ಘೋಷಣೆ

ratnakar
ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ಮರುನಾಮಕರಣ, ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ: ಸಿಎಂ ಘೋಷಣೆ
WhatsApp Group Join Now
Telegram Group Join Now

ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್​ ಸಿಟಿ ಎಂದು ಮರುನಾಮಕರಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಇಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ, ದೇವರಾಜ ಅರಸು ಅವರಿಗೆ ಮರಣೋತ್ತರ ಭಾರತ ರತ್ನ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ಎಲೆಕ್ಟ್ರಾನಿಕ್‌ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್‌ ಸಿಟಿ ಎಂದು ನಾಮಕರಣ ಮಾಡಲಾಗುವುದು ಎಂದು ಹೇಳಿದರು.

ಹಾವನೂರು ಆಯೋಗಕ್ಕೆ ವಿರೋಧ ವ್ಯಕ್ತವಾಯ್ತು. ಆದರೂ ಜಾರಿಗೆ ಮಾಡಿದರು. ಉಳುವವನೇ ಭೂಮಿಯ ಒಡೆಯ eಂದು ದೇವರಾಜ ಅರಸು ತಿದ್ದುಪಡಿ ಮಾಡಿದ್ರು. ಬಳಿಕ ಉಳುವವನೆ ಭೂ ಸೆಕ್ಷನ್ 17a, b ತಿದ್ದುಪಡಿ ಮಾಡಿ ಜಮೀನು‌ ನೋಡದೆಯೇ ಜಮೀನು ಖರೀದಿ ಮಾಡುವ ರೀತಿ ಮಾಡಿದ್ರು. ಯಾರು ಮಾಡಿದ್ದು? ನಾವು ಸುಮ್ಮನೇ ಇದ್ದೀವಿ. ಇದನ್ನ ಗಂಭೀರವಾಗಿ ಚರ್ಚೆ ಮಾಡಬೇಕಿದೆ. ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ‌ಭೂಸುಧಾರಣೆ ಕಾಯ್ದೆಯನ್ನು ವಿಧಾನಪರಿಷತ್​ನಲ್ಲಿ ಬಹುಮತ ಸಿಕ್ಕಾಗ ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡುತ್ತೇನೆ. 98ಎ, ಬಿ ಸೆಕ್ಷನ್​​ಗಳನ್ನು ತಿದ್ದುಪಡಿ ಮಾಡಿದ್ದನ್ನು ರದ್ದುಪಡಿಸಲಾಗುವುದು. ಅಪ್ಪರ್ ಹೌಸ್ ನಲ್ಲಿ‌ ಮೆಜಾರಿಟಿ ಬರಲಿ ಎಂದು ಕಾಯುತ್ತಿದ್ದೇನೆ. ಅವರ ತಿದ್ದುಪಡಿಯನ್ನು ಬದಲಾವಣೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಸಮಾಜದಲ್ಲಿ ಮೇಲು ಕೀಳು ಇರಬಾರದು. ಬಡವ ಬಲ್ಲಿದ ಇರಬಾರದು. ಜಾತಿ ವ್ಯವಸ್ಥೆ ಇರಬಾರದು, ಎಲ್ಲರೂ ಮನುಷ್ಯರಾಗಿ ಸಮಾನವಾಗಿ ಬದುಕಬೇಕು ಎಂಬುವುದೇ ಬಸವಾದಿ ಶರಣರ ಕನಸು. ಇದೇ ತತ್ವದ ಆಧಾರದ ಮೇಲೆ ಅಂಬೇಡ್ಕರ್‌ ಅವರು ಸಂವಿಧಾನ ರಚಿಸಿದರು. ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರು ಸಹ ಈ ತತ್ವ ಸಿದ್ದಾಂತಗಳ ಆಧಾರದಲ್ಲಿ ಆಡಳಿತ ನಡೆಸಿ, ರಾಜ್ಯದಲ್ಲಿ ಹಲವಾರು ಕ್ರಾಂತಿಕಾರಿ ಬದಲಾವಣೆಗಳನ್ನು ತಂದರು. ದೇವರಾಜ ಅರಸು ಅವರು ಅರಸು ಮನೆತನದಲ್ಲಿ ಹುಟ್ಟಿದ್ದರೂ, ಸಮಾಜದ ತಳ ಸಮುದಾಯವಾದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರ ಬಗ್ಗೆ ಬಹಳ ಕಾಳಜಿ ಹೊಂದಿದ್ದರು. ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು, ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಲು ನಮ್ಮ ಸಂವಿಧಾನ ಒತ್ತು ನೀಡಿದೆ. ಇದೇ ಹಾದಿಯಲ್ಲಿ ಸಂವಿಧಾನಕ್ಕೆ ಬದ್ಧವಾಗಿ ನಾವು ಆಡಳಿತ ನಡೆಸುತ್ತಿದ್ದೇವೆ. ನೆಹರು ಕಾಲದಿಂದ ಇಂದಿನವರೆಗೂ ಅಸಮಾನನತೆಯ ಸಮಾಜವನ್ನು ತೊಡೆದು ಸಮ ಸಮಾಜ ನಿರ್ಮಾಣಕ್ಕಾಗಿ ನಿರಂತರವಾಗಿ ಪ್ರಯತ್ನಗಳನ್ನು ನಡೆಸಲಾಗಿದೆ ಎಂದರು.

WhatsApp Group Join Now
Telegram Group Join Now
Share This Article