ಬೆಳಗಾವಿ : ಮುಂಬರುವ ದಿನಗಳಲ್ಲಿ ಗ್ರಾಮ ಪಂಚಾಯತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ನಿನ್ನೆ ಅಧಿವೇಶನದಲ್ಲಿ ಮಾತನಾಡಿದ ಸಿಎಂ, ಈಗಾಗಲೇ ಗೌರವ ಧನ ಹೆಚ್ಚಳ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆರ್ಥಿಕತೆ ಸುಧಾರಿಸಿದರೆ ಗ್ರಾಮ ಪಂಚಾಯತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎಂದು ಘೋಷಿಸಿದ್ದಾರೆ.