ಬೆಂಗಳೂರು: ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲು ಅಕ್ಟೋಬರ್ 7ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
ಈಗಾಗಲೇ ರಾಜ್ಯದ ಸಮಸ್ಯೆ ಕುರಿತಂತೆ ಚರ್ಚಿಸೋ ಸಂಬಂಧ ಸರ್ವಪಕ್ಷಗಳ ಸಭೆಯನ್ನು ಕರೆಯುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಅಧಿವೇಶನದ ಸಂದರ್ಭದಲ್ಲಿ ವಿಪಕ್ಷಗಳ ನಾಯಕರಿಗೆ ಭರವಸೆಯನ್ನು ನೀಡಿದ್ದರು.
ತಾವು ನೀಡಿದಂತ ಭರವಸೆಯಂತೆ ಅಕ್ಟೋಬರ್ 7ರಂದು ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕರು, ಕಾಂಗ್ರೆಸ್, ಜೆಡಿಎಸ್ ನಾಯಕರು, ಪರಿಷತ್ ವಿಪಕ್ಷ ನಾಯಕರು ಭಾಗವಹಿಸಲಿದ್ದಾರೆ.
ಈ ಸರ್ವಪಕ್ಷಗಳ ಸಭೆಯಲ್ಲಿ ಎಸ್ಸಿ, ಎಸ್ಟಿ ಮೀಸಲಾತಿ ಸಂಬಂಧ ನ್ಯಾಯಮೂರ್ತಿ ಮೋಹನ್ ದಾಸ್ ಸಮಿತಿ ಸಲ್ಲಿಸಿದ್ದಂತ ವರದಿಯ ಬಗ್ಗೆಯೂ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ.