ಹುಬ್ಬಳ್ಳಿ: ಮಹದಾಯಿ ವಿಚಾರವಾಗಿ ಅನಗತ್ಯವಾಗಿ ಕಾಂಗ್ರೆಸ್ ನಿಂದ ಗೊಂದಲ ಸೃಷ್ಟಿಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಈ ವಿಚಾರವಾಗಿ ಮಾತನಾಡಿದ ಅವರು, ಮಹದಾಯಿ ಯೀಜನೆ ವಿಚಾರದಲ್ಲಿ ಡಿಪಿಆರ್ ಗೆ ಒಪ್ಪಿಗೆ ನೀಡಿರುವ ಆದೇಶದಲ್ಲಿ ಸಹಿ ಇದೆ. ಆದರೂ ಕಾಂಗ್ರೆಸ್ ಯಾವ ಉದ್ದೇಶಕ್ಕಾಗಿ ಆರೋಪ ಮಾಡುತ್ತಿದ್ದಾರೆ ಗೊತ್ತಿಲ್ಲ. ಅನಗತ್ಯವಾಗಿ ಗೊಂದಲ ಸೃಷ್ಟಿಸುವುದು ಬೇಡ ಎಂದರು.
ಮಹದಾಯಿಗಾಗಿ ಹೋರಾಟಕ್ಕೆ ತಾರ್ಕಿಕ ಜಯ ಸಿಕ್ಕಿದೆ. ಹೀಗಿರುವಾಗ ಈ ವೇಳೆ ಲೋಪದೋಷ ಹುಡುಕುವುದು ಅವರ ಮನಸ್ಥಿತಿಯನ್ನು ತೋರುತ್ತದೆ. ಕಾಂಗ್ರೆಸ್ ನಾಯಕರ ಟೀಕೆ, ಟಿಪ್ಪಣಿಗಳಿಗೆ ತಲೆ ಕೆಡಿಸಿಕೊಳ್ಳಲ್ಲ. ಕ್ಲಿಯರನ್ಸ್ ಬಳಿಕ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು ಎಂದರು.