ಬೆಳಗಾವಿ : ಸಂಜಯ್ ರಾವತ್ ದೇಶ ದ್ರೋಹಿ ಎಂದು ಅಧಿವೇಶನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುಡುಗಿದ್ದಾರೆ.
ಸಂಜಯ್ ರಾವತ್ ದೇಶ ದ್ರೋಹಿ, ಅವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸಂಜಯ್ ರಾವುತ್ ಇದೇ ರೀತಿ ಮಾತನಾಡುವುದನ್ನು ಮುಂದುವರೆಸಿದ್ರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ. ರಾವತ್ ಚೀನಾ ಏಜೆಂಟ್ ಇರಬಹುದೆಂಬ ಅನುಮಾನವಿದೆ, ಪ್ರಚೋದನೆ ಮಾಡಿದರೆ ಸೈನಿಕರ ರೀತಿಯಲ್ಲೇ ಹಿಮ್ಮೆಟ್ಟಿಸುತ್ತೇವೆ. ಮೊದಲು ಅವರ ರಾಜ್ಯದಲ್ಲಿರುವ ಜನರನ್ನು ರಕ್ಷಣೆ ಮಾಡಲಿ ಎಂದು ಕಿಡಿಕಾರಿದ್ದಾರೆ.
ಇನ್ನು ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದ್ದು, ಸಂಜಯ್ ರಾವತ್ ಗೆ ಮಾನ ಮರ್ಯಾದೆ ಇದ್ಯಾ.. ಅವರಿಗೆ ನಾಗರಿಕತೆ ಗೊತ್ತಿಲ್ಲ, ಸಂಸ್ಕೃತಿ ಗೊತ್ತಿಲ್ಲ ಎಂದು ಕಿಡಿಕಾರಿದ್ದಾರೆ.