ವಿಜಯಪುರ: ಅನಾರೋಗ್ಯದಿಂದ ಬಳಲುತ್ತಿರುವ ಸಿದ್ದೇಶ್ವರ ಶ್ರೀಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಜಯಪುರಕ್ಕೆ ಆಗಮಿಸಿ ಜ್ಞಾನ ಯೋಗಾಶ್ರಮದಲ್ಲಿ ಶ್ರೀಗಳನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.
ನಂತರ ಮಾತನಾಡಿದ ಅವರು, ಕಳೆದೊಂದು ವಾರದಿಂದ ಪ್ರತಿದಿನ ಕರೆ ಮಾಡಿ ಆರೋಗ್ಯ ವಿಚಾರಿಸುತ್ತಿದ್ದೇನೆ. ಅವರ ಆರೋಗ್ಯದ ಮೇಲೆ ಕಾಳಜಿ ವಹಿಸಲು ಸೂಚಿಸಿದ್ದೇನೆ ಎಂದರು.
ಪ್ರಧಾನಿ ಮೋದಿ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಮಾತನಾಡಿ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಶ್ರೀಗಳು ಆದಷ್ಟು ಬೇಗ ಗುಣಮುಖರಾಗಲೆಂದು ಪ್ರಧಾನಿ ಹಾರೈಸಿದ್ದಾರೆ ಎಂದು ತಿಳಿಸಿದರು.
ಮುಂದುವರೆದು ಮಾತನಾಡಿ, ಶ್ರೀಗಳ ಬದುಕೇ ನಮಗೆ ಮಾದರಿ. ಅವರ ಮಾತು, ನಡೆ, ನುಡಿ ನಮ್ಮೆಲ್ಲರಿಗೂ ದಾರಿದೀಪವಾಗಿದೆ. ಪುಣ್ಯಭೂಮಿ ವಿಜಯಪುರವನ್ನು ಅವರ ಕರ್ಮಭೂಮಿ ಮಾಡಿಕೊಂಡಿದ್ದು ನಮ್ಮ ಪುಣ್ಯ ಎಂದು ಬಣ್ಣಿಸಿದರು.