spot_img
spot_img
spot_img
18.2 C
Belagavi
Monday, September 26, 2022
spot_img

ಬೆಳಗಾವಿಯ 700 ಎಕರೆ ಹಸ್ತಾಂತರಕ್ಕೆ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ : ಸಿಎಂ ಬೊಮ್ಮಾಯಿ 

spot_img
spot_img

For Breaking News Download App

ನವದೆಹಲಿ: ಬೆಳಗಾವಿಯಲ್ಲಿ 700 ಎಕರೆ ಹುಲ್ಲುಗಾವಲಿನ ಪ್ರದೇಶ ರಕ್ಷಣಾ ಇಲಾಖೆಯ ಸುಪರ್ದಿಯಲ್ಲಿದ್ದು, ಈ ಪ್ರದೇಶವನ್ನು ರಾಜ್ಯಕ್ಕೆ ಹಸ್ತಾಂತರಿಸುವಂತೆ ಮನವಿ ಮಾಡಿದ್ದು, ಇದಕ್ಕೆ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ವಿಚಾರ ಪ್ರಸ್ತಾಪಿಸಲಾಗಿದೆ ಎಂದರು.

ಬೆಳಗಾವಿ ನಗರದಲ್ಲಿ ಐ.ಟಿ ಪಾರ್ಕ್ ಮಾಡುವ ಉದ್ದೇಶವಿದೆ. ಅದಕ್ಕೆ ಈ ಜಮೀನನ್ನು ರಾಜ್ಯ ಸರ್ಕಾರ ತನ್ನ ಸುಪರ್ದಿಗೆ ಪಡೆಯಬೇಕಾಗುತ್ತದೆ. ಅದಕ್ಕಾಗಿ ಜಮೀನನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಿ ಎಂದು ಮನವಿ ಮಾಡಿಕೊಳ್ಳಲಾಯಿತು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಂಗ್ ಅವರು, ಸಂಬಂಧಪಟ್ಟವರ ಜತೆ ಮಾತನಾಡಿ ವರದಿ ತರಿಸಿಕೊಂಡು ತೀರ್ಮಾನ ಮಾಡುವುದಾಗಿ ತಿಳಿಸಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -