spot_img
spot_img
spot_img
18.5 C
Belagavi
Thursday, September 29, 2022
spot_img

ಕುಂದಾನಗರಿಯ 754 ಎಕರೆ ಜಮೀನು ಶೀಘ್ರ ಸರಕಾರದ ವಶಕ್ಕೆ : ಸಿಎಂ ಬೊಮ್ಮಾಯಿ

spot_img

ಬೆಳಗಾವಿ : ನಗರದ ಹೊರವಲಯದಲ್ಲಿರುವ ಹಿಂಡಾಲ್ಕೋ ಬಳಿಯ 754 ಎಕರೆ ಭೂಮಿಯನ್ನು ಶೀಘ್ರ ಸರಕಾರದ ತನ್ನ ವಶಕ್ಕೆ ಪಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಕಳೆದ ವಾರ ದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದೇನೆ. ಮಿಲ್ಚ್ರಿ ವಶದಲ್ಲಿರುವ ಈ ಜಮೀನಿನ ಕುರಿತು ಶೀಘ್ರ ವಿಚಾರಿಸಿ, ಕರ್ನಾಟಕ ಸರಕಾರಕ್ಕೆ ಹಸ್ತಾಂತರಿಸಲು ಕ್ರಮ ಕೈಗೊಳ್ಳುವ ಭರವಸೆಯನ್ನು ಅವರು ನೀಡಿದ್ದಾರೆ ಎಂದರು.

ಶಾಸಕ ಅಭಯ ಪಾಟೀಲ ಈ ಜಮೀನಿನ ಕುರಿತು ಮುಖ್ಯಮಂತ್ರಿಗಳ ಮೇಲೆ ನಿರಂತರ ಒತ್ತಡ ಹೇರುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು. ಬೈಲಹೊಂಗಲದ ಸಂಗೊಳ್ಳಿ ರಾಯಣ್ಣ ಮಿಲ್ಟ್ರಿ ಸ್ಕೂಲ್ ನ್ನು ಮಿಲ್ಟ್ರಿ ಸೈನಿಕ ಶಾಲೆಯ ವಶಕ್ಕೆ ಪಡೆಯುವ ಕುರಿತು ಕೇಂದ್ರ ರಕ್ಷಣಾ ಸಚಿವರ ಬಳಿ ಮನವಿ ಮಾಡಿದ್ದೇನೆ. ಅವರು ತಕ್ಷಣ ಸ್ಪಂದಿಸಿ ಸೂಕ್ತ ಕ್ರಮ ಕೈಗೊಂಡಿದ್ದಾರೆ ಎಂದು ಅವರು ತಿಳಿಸಿದರು.

ಇನ್ನು ಹಿಜಾಬ್ ವಿವಾದ ನ್ಯಾಯಾಲಯದಲ್ಲಿದೆ. ರಾಜ್ಯ ಸರಕಾರದ ಮೊದಲ ಆದ್ಯತೆ ಮಕ್ಕಳ ಶಿಕ್ಷಣ ಮತ್ತು ಸುರಕ್ಷತೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -