ಹಾವೇರಿ : ಫೆಬ್ರವರಿ ತಿಂಗಳಿನಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡುತ್ತೇವೆ. ಈಗಾಗಲೇ ಹಣಕಾಸು ಇಲಾಖೆ ಜೊತೆಗೆ ಮಾತುಕತೆ ನಡೆಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಇಲಾಖೆ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಲಿದ್ದೇವೆ. ಜನವರಿ ತಿಂಗಳಿನಿಂದಲೇ ಬಜೆಟ್ ಸಿದ್ಧತೆ ಶುರು ಮಾಡಲಿದ್ದೇವೆ ಎಂದು ತಿಳಸಿದ್ದಾರೆ.
ಇನ್ನು ಕೊವಿಡ್ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರವು ಅಗತ್ಯ ಸೂಚನೆ ನೀಡಿದೆ. ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು, ಬಸ್, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.