ಬೆಳಗಾವಿ : ಮೀಸಲಾತಿ ಘೋಷಿಸಿದ್ರೆ ಸನ್ಮಾನ, ಇಲ್ಲವಾದಲ್ಲಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪುನರ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಸಿಎಂ ಬೊಮ್ಮಾಯಿ ಸಂಪುಟ ಸಭೆಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿಲ್ಲ.
ಕಾನೂನು ತಜ್ಞರ ಅಭಿಪ್ರಾಯ ಪಡೆದು ಈ ಬಗ್ಗೆ ನಿರ್ಧರಿಸುತ್ತೇವೆ, ಮುಂದಿನ ಸಂಪುಟ ಸಭೆಯಲ್ಲಿ ನೋಡೋಣ ಎಂದು ಹೇಳಿ ಮೀಸಲಾತಿ ಘೋಷಣೆ ವಿಚಾರಕ್ಕೆ ಅಂತ್ಯ ಹಾಡಿದ್ದಾರೆ.
ಇನ್ನು ಸುವರ್ಣಸೌಧದಲ್ಲಿ ಪಂಚಮಸಾಲಿ 2ಎ ಮೀಸಲಾತಿ ಒತ್ತಾಯಿಸಿ ಬೆಳಗಾವಿ ಸುವರ್ಣಸೌಧದ ಎದುರು ಪಂಚಮಸಾಲಿ ಸಮಾಜದಿಂದ ವಿರಾಟ್ ಸಮಾವೇಶ ಆರಂಭವಾಗಿದೆ.
ಸಮಾವೇಶದಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿದ್ದು, ಇಂದು ಮೀಸಲಾತಿ ಘೋಷಿಸಬೇಕು. ಘೋಷಿದರೆ ನಾವು ಸಿಎಂ ಗೆ ಸನ್ಮಾನ ಮಾಡುತ್ತೇವೆ, ಇಲ್ಲವಾದಲ್ಲಿ ಹೋರಾಟ ಮುಂದುವರೆಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದ್ದಾರೆ.