ಹುಬ್ಬಳ್ಳಿ : ಪಂಚಮಸಾಲಿ -ಒಕ್ಕಲಿಗ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಅನಗತ್ಯವಾಗಿ ಗೊಂದಲ ಬೇಡ ಇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಮಧ್ಯಂತರ ವರದಿ ಇದೆ. ಅಂತಿಮ ಆದೇಶದಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಇನ್ನೂ ಇದರಲ್ಲಿ ನಮ್ಮ ಸರ್ಕಾರ ಉದ್ದೇಶ ಹೇಳಿದ್ದೇವೆ. ಅಂತಿಮ ವರದಿಯಲ್ಲಿ ಅಂಕಿ-ಅಂಶಗಳ ಮಾಹಿತಿ ನೀಡುತ್ತೇವೆ ಎಂದರು.
ಇನ್ನು ಮೀಸಲಾತಿ ವಿಚಾರದಲ್ಲಿ ಸಂಬಂಧಪಟ್ಟವರ ಜೊತೆ ಚರ್ಚಿಸಲಾಗುವುದು, ಯಾವುದೇ ಕಾರಣಕ್ಕೂ ಹಿಂದುಳಿದ ವರ್ಗದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ ಆತಂಕಪಡುವ ಅಗತ್ಯವಿಲ್ಲ ಎಂದರು.