spot_img
23.5 C
Belagavi
Sunday, December 4, 2022
spot_img

ಗಡಿ ವಿವಾದ : ಸರ್ವ ಪಕ್ಷಗಳ ಸಭೆ ಕರೆದ ಸಿಎಂ

ಬೆಂಗಳೂರು: ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿಕೆ ವಿಚಾರವಾಗಿ ಚರ್ಚಿಸಲು ಸರ್ವಪಕ್ಷೆ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು , ಗಡಿ ವಿವಾದ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಹೇಳಿಕೆ ಗಮನಿಸಿದ್ದೇನೆ. ಏಕನಾಥ್ ಶಿಂಧೆ ಹೇಳಿಕೆ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆ ಕರೆಯುತ್ತೇವೆ. ಮುಂದಿನ ವಾರ ಸರ್ವಪಕ್ಷ ಸಭೆ ನಡೆಯಲಿದೆ ಎಂದರು.

ಗಡಿ ವಿವಾದ ವಿಚಾರವಾಗಿ ಮಹಾರಾಷ್ಟ್ರ ಸರ್ಕಾರವೇ ಸುಪ್ರೀಂ ಕೋರ್ಟ್ ನಲ್ಲಿ ದಾವೆ ಹೂಡಿದೆ. ವಾದ ಮಂಡನೆಗೆ ನಾವು ಸಮರ್ಥವಾಗಿ ತಯಾರಿ ಮಾಡಿಕೊಂಡಿದ್ದೇವೆ. ಈ ಮಧ್ಯೆ ಮಾತುಕತೆ ನಡೆಸುವ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ.

ಈ ಹಿಂದೆ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸುವ ಬಗ್ಗೆ ತೀರ್ಮಾನಿಸಲಾಗಿತ್ತು. ಹಾಗಾಗಿ ಸದ್ಯ ನಮಗೆ ಸುಪ್ರೀಂ ಕೋರ್ಟಿನ ಮುಂದೆ ವಾದ ಮಂಡಿಸುವ ಉದ್ದೇಶವಿದೆ. ಆದರೆ ಈಗ ಮಾತುಕತೆ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ. ಈ ಮೂಲಕ ಗಡಿ ವಿಚಾರವೇ ಮುಗಿದು ಹೋಗಿದೆ ಎಂದು ಹೇಳಿದರು.

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -