spot_img
spot_img
spot_img
34.1 C
Belagavi
Monday, May 29, 2023
spot_img

ಹಾಲಿನ ದರ ಏರಿಕೆಗೆ ಸಿಎಂ ಅಸಮ್ಮತಿ 

ಬೆಂಗಳೂರು: ಗ್ರಾಹಕರಿಗೆ ಹೊರೆಯಾಗದಂತೆ ಹಾಗೂ ರೈತರಿಗೆ ಅನ್ಯಾಯವಾಗದಂತೆ ಸೂತ್ರ ರೂಪಿಸಿಕೊಂಡು ಬರಲು ಕೆಎಂ ಫ್ ಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಹಾಲಿನ ದರ ಏರಿಕೆಯ ಬಗ್ಗೆ ಪ್ರತಿಕ್ರಿಯಿಸಿ , ವಿವಿಧ ರಾಜ್ಯಗಳಲ್ಲಿರುವ ಹಾಲಿನ ದರ ಹಾಗೂ ಸಂಬಂಧಿಸಿದ ಸಂಪೂರ್ಣ ಮಾಹಿತಿ,ಕೆಎಂಎಫ್ ಸಂಸ್ಥೆಗೆ ತಗಲುತ್ತಿರುವ ವೆಚ್ಚ,ಹಾಲಿನ ದರ ಏರಿಕೆಗೆ ಕಾರಣಗಳು, ಸಂಸ್ಥೆಯಲ್ಲಿ ಆಗುತ್ತಿರುವ ನಷ್ಟಗಳನ್ನು ತಡೆಗಟ್ಟಲು ಸಂಸ್ಥೆಗಳು ತೆಗೆದುಕೊಂಡಿರುವ ಕ್ರಮಗಳ ಬಗ್ಗೆಯೂ ಮಾಹಿತಿ ಪಡೆಯಲಾಗಿದೆ.

ಗ್ರಾಹಕ ಹಾಗೂ ರೈತನಿಗೆ ಅನುಕೂಲವಾಗುವ ಸೂತ್ರವನ್ನು ಎರಡು ದಿನಗಳಲ್ಲಿ ರೂಪಿಸಿಕೊಂಡು, ಕೆಎಂಎಫ್ ನಿರ್ದೇಶಕರ ಮಂಡಳಿ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಬೇಕೆಂದು ತಿಳಿಸಲಾಗಿದೆ.

3 ರೂ. ದರ ಹೆಚ್ಚಳ ಮಾಡುವುದು ಬೇಡ, ಆದರೆ ರೈತರು ಹಾಗೂ ಗ್ರಾಹಕರ ಹಿತದೃಷ್ಟಿಯಿಂದ ಸೂಕ್ತ ನಿರ್ಣಯ ತೆಗೆದುಕೊಳ್ಳಬೇಕೆಂದು ಸಲಹೆ ನೀಡಲಾಗಿದೆ ಎಂದರು.

Related News

ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ವಂದೇ ಭಾರತ್ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಅಸ್ಸಾಂನ ಗುವಾಹಟಿಗೆ ಹೊರಟಿದೆ. ಈ...

ಮಣಿಪುರದಲ್ಲಿ ಮತ್ತೆ ತಲೆ ಎತ್ತಿದ ಹಿಂಸಾಚಾರ ಪೊಲೀಸ್‌ ಸೇರಿದಂತೆ ಐವರು ಸಾವು

ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -