spot_img
spot_img
spot_img
18 C
Belagavi
Thursday, September 29, 2022
spot_img

ಇಂದು ಸಿಎಂ ಹಾವೇರಿ, ಧಾರವಾಡ ಜಿಲ್ಲಾ ಪ್ರವಾಸ

spot_img

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾವೇರಿ, ಧಾರವಾಡಗಳತ್ತ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಶಿಗ್ಗಾವಿ, ಸವಣೂರಿನಲ್ಲಿ ವಕೀಲರ ಸಂಘಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಮಾಡಲಿದ್ದಾರೆ.

ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಶಿಗ್ಗಾಂವ ತೆರಳಲಿರುವ ಸಿಎಂ ಬೊಮ್ಮಾಯಿ ಅವರು, ಶಿಗ್ಗಾಂವಿ ಮತ್ತು ಸವಣೂರಿನಲ್ಲಿ ವಕೀಲರ ಸಂಘಗಳ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಹಾವೇರಿ ನ್ಯಾಯಾಲಯದ ಆವರಣದಲ್ಲಿ ನಿರ್ಮಾಣವಾಗಿರುವ ವಕೀಲರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಲಿದ್ದಾರೆ.

ಬಳಿಕ ಸಂಜೆ ಹಾವೇರಿಯ ಪ್ರವಾಸಿ ಮಂದಿರದ ಬಳಿ ನಿರ್ಮಿಸಲಾಗಿರುವ ಸಂಚಾರಿ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.

ಈ ಎಲ್ಲ ಕಾರ್ಯಕ್ರಮಗಳ ನಂತರ ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಅವರು, ಹಾವೇರಿಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದ ಮೂಲಕ ಮರಳಲಿದ್ದಾರೆ.

 

 

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -