ಬೆಂಗಳೂರು: ಸಾಲದಿಂದ ದೇಶ ದಿವಾಳಿಯಾಗಿದೆ ಎಂಬ ಸಿಎಂ ಹೇಳಿಕೆ ವಿಚಾರ ‘ ಪ್ರಧಾನಿ ಬಗ್ಗೆ ಮಾತನಾಡುವ ನೈತಿಕತೆ ಸಿಎಂ ಸಿದ್ದರಾಮಯ್ಯಗೆ ಇಲ್ಲವೆಂದು ಹೆಚ್ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
‘ನನ್ನ 20 ತಿಂಗಳ ಅವಧಿಯಲ್ಲಿ 3,500 ಕೋಟಿ ಸಾಲ ಮಾಡಿದ್ದೆ. ಹಿಂದೆ ಸಿದ್ದರಾಮಯ್ಯ ಸರ್ಕಾರ 2 ಲಕ್ಷ 45 ಸಾವಿರ ಕೋಟಿ ಸಾಲ ಮಾಡಿತ್ತು. ಈಗ 5 ಲಕ್ಷ 71 ಸಾವಿರ ಕೋಟಿಗೂ ಅಧಿಕ ಸಾಲ ಇದೆ. ನಿಮಗೆ ಪ್ರಧಾನಿ ಮೋದಿ ಬಗ್ಗೆ ಮಾತಾಡುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.