ಹಾಸನ: ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಆಘಾತ ವ್ಯಕ್ತಪಡಿಸಿದ್ದು, ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ಶಿಕ್ಷೆ ಆಗುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನಿಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಪ್ಪು ಯಾರೇ ಮಾಡಿದ್ದರೂ ಕಠಿಣ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಕಾನೂನುಬಾಹಿರ ಕೃತ್ಯ ಎಸಗುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು. ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ. ಈಗಾಗಲೇ ಪೊಲೀಸರು ಇಬ್ಬರು ಕೊಲೆ ಆರೋಪಿಗಳನ್ನು ಬಂಧಿಸಿದ್ದಾರೆ.
ಇನ್ನೂ ಹಲವು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಯಾವುದೇ ಆರೋಪಿ ಕಾನೂನಿನಿಂದ ತಪ್ಪಿಸಿಕೊಳ್ಳಬಾರದೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.