ಬೆಂಗಳೂರು: ಬಾಡಿಗೆದಾರರಿಗೂ ಗೃಹ ಜ್ಯೋತಿ ಸಿಗಲಿದೆ. 200 ಯುನಿಟ್ ಒಳಗೆ ಉಪಯೋಗ ಮಾಡೋ ಬಾಡಿಗೆದಾರರಿಗೂ ಉಚಿತ ವಿದ್ಯುತ್ ಯೋಜನೆ ಅನ್ವಯ ಆಗುತ್ತದೆ. ಕಮರ್ಷಿಯಲ್ ಅವರಿಗೆ ಯೋಜನೆ ಅನ್ವಯ ಇಲ್ಲ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಡಿಗೆದಾರರಿಗೂ ಉಚಿತ ವಿದ್ಯುತ್ ಕೊಡ್ತೀವಿ. ಬಡವರು ಯಾರು 200 ಯುನಿಟ್ ಒಳಗೆ ಬಳಸುತ್ತಾರೆ, ಅವರಿಗೆ ಉಚಿತವಾತ ವಿದ್ಯುತ್ ಕೊಡ್ತೀವಿ. 200 ಯುನಿಟ್ ಒಳಗೆ ಬಳಸೋರು ಬಿಲ್ ಕಟ್ಟೋ ಹಾಗೆ ಇಲ್ಲ. ಬಾಡಿಗೆದಾರರಿಗೂ ಇದು ಅನ್ವಯ ಆಗುತ್ತೆ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಬಿಜೆಪಿ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಪಾಪ ಅವರಿಗೆ ಏನೂ ಇಲ್ಲ ಅದಕ್ಕೆ ಪ್ರತಿಭಟನೆ ಮಾಡ್ತಿದ್ದಾರೆ. ಬಿಜೆಪಿ ಅವರಿಗೆ ಯಾವ ನೈತಿಕತೆ ಇದೆ ಪ್ರತಿಭಟನೆ ಮಾಡೋಕೆ?. ಬಿಜೆಪಿ ಅವರು 10 ಗಂಟೆ ವಿದ್ಯುತ್ ಕೊಡ್ತೀವಿ ಅಂದ್ರು ಕೊಟ್ರಾ?, ಸಾಲಮನ್ನಾ ಮಾಡ್ತೀವಿ ಅಂದ್ರು ಮಾಡಿದ್ರಾ?, ನೀರಾವರಿಗೆ 1.5 ಲಕ್ಷ ಕೋಟಿ ಖರ್ಚು ಮಾಡ್ತೀನಿ ಅಂದ್ರು ಮಾಡಿದ್ರಾ?, ಹೀಗಿರುವಾಗ ನಮ್ಮನ್ನ ಪ್ರಶ್ನೆ ಮಾಡೋಕೆ ಇವರಿಗೆ ನೈತಿಕತೆ ಇದೆಯಾ ಎಂದು ಪ್ರಶ್ನಿಸಿದರು.