ಬೆಂಗಳೂರು : ಇಂದು ಸುಪ್ರೀಂ ಕೋರ್ಟ್‌ನಲ್ಲಿ ಬೆಳಗಾವಿ ಗಡಿ ವಿವಾದದ ಕುರಿತು ಅರ್ಜಿ ವಿಚಾರಣೆ ನಡೆಯಲಿದೆ.ಈ ಸಂಬಂಧ ಅಡ್ವೊಕೇಟ್ ಜನರಲ್ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಮಾತುಕತೆ ನಡೆಸಿದರು.
ಚಳ್ಳಕೆರೆ, ಹಿರಿಯೂರು ಪ್ರವಾಸ ಮುಗಿಸಿ ಬೆಂಗಳೂರಿಗೆ ಬರುತ್ತಿದ್ದಂತೆ, ತಮ್ಮ ಸರ್ಕಾರಿ ನಿವಾಸಕ್ಕೆ ಅಡ್ವೊಕೇಟ್ ಜನರಲ್ ಅವರನ್ನು ಕರೆಯಿಸಿ ಮಾತುಕತೆ ನಡೆಸಿದರು.
ಪ್ರಭುಲಿಂಗ ನಾವದಗಿ ಜೊತೆಗಿನ ಮಾತುಕತೆ ವೇಳೆ, ಮಹಾರಾಷ್ಟ್ರ ಸರ್ಕಾರದ ಅರ್ಜಿಯನ್ನು ಪರಿಗಣಿಸದ ರೀತಿ ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥವಾಗಿ ವಾದ ಮಂಡಿಸುವ ಬಗ್ಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಈಗಾಗಲೇ ಸರ್ಕಾರದ ಪರವಾಗಿ ವಾದಿಸಲು ಮುಕುಲ್ ರೋಹ್ಟಗಿ ನೇತೃತ್ವದ ಹಿರಿಯ ವಕೀಲರ ತಂಡ ಸಿದ್ದವಾಗಿದ್ದು, ತಂಡಕ್ಕೆ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಅಗತ್ಯ ಸಹಕಾರ ನೀಡಲಿದ್ದಾರೆ.