ಉತ್ತರ ಪ್ರದೇಶ: ಪಂಚರಾಜ್ಯ ಚುನಾವಣೆಯಲ್ಲಿ ಉತ್ತರ ಪ್ರದೇಶ ರಾಜ್ಯವೂ ಎಲ್ಲಾ ಪಕ್ಷಗಳಿಗೆ ಅತ್ಯಂತ ಮಹತ್ವದ ಕ್ಷೇತ್ರ ಆದರೆ ಈ ವಿಧಾನಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ಪ್ರಕಟಗೊಂಡಿದೆ. ಕಳೆದ ಬಾರಿ ಸಿಎಂ ಆಗಿದ್ದ ಯೋಗಿ ಆದಿತ್ಯನಾಥ್ ಭರ್ಜರಿ ಆಯ್ಕೆಯಾಗಿದ್ದಾರೆ.
1 ಲಕ್ಷಕ್ಕೂ ಹೆಚ್ಚು ಮತಗಳಿಂದ ಸಿಎಂ ಯೋಗಿ ಆದಿತ್ಯನಾಥ್ ಗೋರಖ್ ಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಸಿಎಂ ಯೋಗಿ ನೇತೃತ್ವದಲ್ಲಿ ಉತ್ತರ ಪ್ರದೇಶ ಬಿಜೆಪಿ ಸರ್ಕಾರ ಮತ್ತೆ ಅಧಿಕಾರದ ಗದ್ದುಗೆಯನ್ನು ಏರಲಿದೆ.
ಈಗಾಗಲೇ 270 ಕ್ಷೇತ್ರದಲ್ಲಿ ಮುನ್ನೆಡೆಯಲ್ಲಿದ್ದಾರೆ.ಇನ್ನು 128 ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷ ಎರಡನೇ ಸ್ಥಾನದಲ್ಲಿದೆ. ಇನ್ನು ಹೀನಾಯವಾಗಿ ಕಾಂಗ್ರೆಸ್ ಸೋತಿದ್ದು ಕೇವಲ ಎರಡು ಕ್ಷೇತ್ರದಲ್ಲಿ ಜಯ ಸಾಧಿಸಿದೆ.