ಹುಬ್ಬಳ್ಳಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ನಡೆಯೂ ನಾಳೆ ಬೆಳಗಾವಿಯಲ್ಲಿ ಎಂಇಎಸ್ ಮಹಾಮೇಳಾವ್ ಆಯೋಜಿಸಿರುವ ಎಂಇಎಸ್ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಇಎಸ್ ಪುಂಡಾಟ ಇದೇ ಮೊದಲಲ್ಲ. 50 ವರ್ಷದಿಂದ ಎಂಇಎಸ್ ಪುಂಡಾಟ ಮಾಡುತ್ತಾ ಬಂದಿದೆ. ನಾವು ಅವರನ್ನು ಹದ್ದುಬಸ್ತಿನಲ್ಲಿಡುವ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.
ನಾಳೆಯಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಹೊತ್ತಲ್ಲೇ ಮಹಾರಾಷ್ಟ್ರ ಏಕೀಕರಣ ಸಮಿತಿಯಿಂದ ಬೆಳಗಾವಿಯಲ್ಲಿ ಮಹಾ ಮೇಳಾವ್ ಆಯೋಜಿಸಲಾಗಿದೆ. ಮಹಾ ಮೇಳಾವ್ ನಲ್ಲಿ ಸಂಸದ ಧೈರ್ಯಶೀಲ ಮಾನೆ ಭಾಗಿಯಾಗಲಿದ್ದಾರೆ.