ಬೆಂಗಳೂರು: ನನ್ನ ಮೇಲೆ ಮಾಡಿರುವ ಆರೋಪಗಳೆಲ್ಲವೂ ನಿರಾಧಾರಾವಾಗಿದ್ದು ನನಗೆ ನೀವು ನೋಟಿಸ್ ಕೊಟ್ಟಿರುವುದು ಕ್ರಮಬದ್ದವಲ್ಲ ಎಂದು ಸಿಎಂ ಸಿದ್ದರಾಮಯ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ ಪತ್ರದ ಮೂಲಕ ಉತ್ತರ ನೀಡಿದ್ದಾರೆ.
ಮುಡಾ ಸೈಟ್ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಳೆದ ಭಾನುವಾರವೇ ಸಿಎಂ 60 ಪುಟಗಳ ಸುದೀರ್ಘ ಪತ್ರ ಬರೆದು ಕೊಟ್ಟಿದ್ದಾರೆ.
ಮುಡಾ ನಿವೇಶನದ ಸಂಪೂರ್ಣ ದಾಖಲಾತಿಗಳು, ಸುಪ್ರೀಂಕೋರ್ಟ್, ಹೈಕೋರ್ಟ್‌ನ ಹಲವು ತೀರ್ಪುಗಳ ಉಲ್ಲೇಖ ಇರುವ ದಾಖಲಾತಿಗಳು ರವಾನಿಸಿ ಅಧಿಕಾರ ದುರ್ಬಳಕೆ ಮಾಡಿಲ್ಲ ಎಂದು ತಿಳಿಸಿದ್ದಾರೆ.