spot_img
spot_img
spot_img
18.7 C
Belagavi
Monday, September 26, 2022
spot_img

ಕಾಲೇಜುಗಳು ಪ್ರಾರಂಭ ಹಿಜಾಬ್ : ಧರಿಸಿ ಬಂದ ವಿದ್ಯಾರ್ಥಿನಿಯರು

spot_img
spot_img

For Breaking News Download App

ಬೆಳಗಾವಿ: ಇಂದಿನಿಂದ ಕಾಲೇಜುಗಳು ಪ್ರಾರಂಭವಾಗಿದ್ದು ಧಾರ್ಮಿಕತೆಗೆ ಸಂಬಂಧಿಸಿದಂತೆ ಹಿಜಾಬ್ ಮತ್ತು ಕೆಸರಿ ಶಾಲುಗಳನ್ನು ಧರಿಸದೆ ತರಗತಿಗಳಿಗೆ ವಿದ್ಯಾರ್ಥಿಗಳಿಗೆ ಹಾಜರಾಗುವಂತೆ ನ್ಯಾಯಾಲಯ ಆದೇಶ ಮಾಡಿದ್ದರು ನಗರದ ಲಿಂಗರಾಜ್ ಕಾಲೇಜಿಗೆ ಹಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂಧ ಘಟನೆ ನಡೆಯಿತು.

ಹಿಜಾಬ್-ಕೇಸರಿ ಶಾಲು ವಿವಾದದ ಹಿನ್ನೆಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು ಇಂದಿನಿಂದ ಕಾಲೇಜುಗಳು ಪ್ರಾರಂಭವಾಗಿದ್ದು ಬೆಳಗಾವಿ ಪೊಲೀಸರು ಕಾಲೇಜುಗಳ ಮುಂದೆ ವ್ಯಾಪಕ ಕಟ್ಟೆಚ್ಚರ ವಹಿಸಿದ್ದು, ಎಲಲಾ ಕಾಲೇಜುಗಳ ಮುಂದೆ ಪೊಲೀಸ್ ಸಿಬ್ಬಂಧಿಗಳನ್ನು ಯೋಜಿಸಲಾಗಿದೆ ಆದರೂ ಲಿಂಗರಾಜ್ ಕಾಲೇಜಿನ ಕೆಲ ವಿದ್ಯಾರ್ಥಿಗಳು ಹಿಜಾಬ್ ಧರಿಸಿಯೇ ಕಾಲೇಜಿನ ಆವರಣವನ್ನು ಪ್ರವೇಶಿಸಿದ್ದಾರೆ.

ಕಾಲೇಜಿನಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಹಿಜಬ್ನ್ನು ತೆಗೆದು ತರಗತಿ ಪ್ರವೇಶ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಲೇಜಿನ ಗೇಟ್ ಬಳಿ ಬಿಗಿ ಪೆÇಲೀಸ್ ಬಂದೋಬಸ್ತ್ ಮಾಡಲಾಗಿದೆ. ಇನ್ನು ಈ ವೆಳೆ ಕೆಲ ವಿದ್ಯಾರ್ಥಿಗಳು ಜಿಜಾಬ್ ತೆರೆಯುವ ವಿಚಾರವಾಗಿ ಕಾಲೇಜು ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಕ್ಯಾಂಪ್ ಪೊಲೀಸ್ ಠಾಣಾ ಸಿಪಿಐ ಪ್ರಭಾಕರ್ ಧರಮಟ್ಟಿ ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಶಾಂತಗೊಳಿಸಿದರು

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -