spot_img
spot_img
spot_img
spot_img
spot_img
spot_img
spot_img
spot_img
spot_img
20.4 C
Belagavi
Sunday, September 24, 2023
spot_img

ಬೆಳಗಾವಿ : ಪ್ರಚೋದನಕಾರಿ ವಾಟ್ಸಾಪ್ ಸಂದೇಶ ಹರಿಬಿಟ್ಟ ಆರೋಪ: ಮೂವರ ವಿರುದ್ಧ ದೂರು

ಬೆಳಗಾವಿ: ಪ್ರಚೋದನಕಾರಿ ವಾಟ್ಸಾಪ್ ಸಂದೇಶಗಳನ್ನು ಹರಿಬಿಟ್ಟ ಆರೋಪದ ಮೇಲೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರ ವಿರುದ್ಧ ದೂರು ದಾಖಲಾಗಿದೆ.

ಸೋಷಿಯಲ್ ಮೀಡಿಯಾದಲ್ಲಿ ಮೇಸೆಜ್ ಹಾಕಿ ಪ್ರಚೋದನೆ ನೀಡುತ್ತಿದ್ದ ಆರೋಪದ ಹಿನ್ನೆಲೆ ಮಾರ್ಕೆಟ್ ಠಾಣೆಯಲ್ಲಿ ಇಬ್ಬರು ಹಾಗೂ ಗ್ರಾಮೀಣ ಠಾಣೆಯಲ್ಲಿ ಒರ್ವನ ವಿರುದ್ಧ ದೂರು ದಾಖಲಾಗಿದೆ.

ಕಾನೂನು ಸುವ್ಯವಸ್ಥೆಗೆ ಭಂಗ ತರುವ ರೀತಿಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ವಾಟ್ಸಪ್, ಫೇಸ್‌ಬುಕ್, ಟ್ವಿಟರ್‌ಗಳಲ್ಲಿ ಅವಹೇಳನಕಾರಿ ಪೋಸ್ಟ್ಗಳನ್ನು ಹಾಕಬಾರದು, ಪ್ರಚೋದನಕಾರಿ ಸಂದೇಶಗಳನ್ನು ಹಾಕಿದರೇ ಹಾಗೂ ಬಂದ ಸಂದೇಶಗಳನ್ನು ಬೇರೆಯವರಿಗೆ ಕಳುಹಿಸಿದರೇ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಮಹಾನಗರ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ತಿಳಿಸಿದ್ದಾರೆ.

ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟು ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು.

ಧರ್ಮ ಮತ್ತು ಭಾಷಿಕರ ಮಧ್ಯೆ ಜಗಳ ಹಚ್ಚುವ ಕೆಲಸ ಯಾರೂ ಮಾಡಬಾರದು. ಬೆಳಗಾವಿ ಜನ ಈ ಬಗ್ಗೆ ಎಚ್ಚರಿಕೆ ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಭಂಗ ತರುವ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Related News

ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ -ಹೆಚ್​ಡಿಕೆ

ಬೆಂಗಳೂರಿಗೆ ಆಗಮಿಸಿದ ಹೆಚ್​ಡಿ ಕುಮಾರಸ್ವಾಮಿ ಅವರು ಕೇಂಪೇಗೌಡ ಏರ್ಪೋರ್ಟ್ ನಲ್ಲಿ ಮಾತನಾಡಿದರು. ಈ ವೇಳೆ, ಅಮಿತ್ ಷಾ ಹಾಗೂ ನಡ್ಡಾ ಜೊತೆ ನಡೆದ ಚರ್ಚೆಗಳ ಬಗ್ಗೆ ದೆಹಲಿಯಲ್ಲಿ ಹೇಳಿದ್ದೇನೆ. ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ...

9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ

ಬೆಂಗಳೂರು: 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. 9ನೇ ತರಗತಿ ಮಕ್ಕಳ ಕಲಿಕಾ ದೃಷ್ಟಿಯಿಂದ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆಸಲು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -