spot_img
spot_img
spot_img
34.1 C
Belagavi
Monday, May 29, 2023
spot_img

ಬೆಂಗಳೂರಿನ ಶಾಲಾ ಮಕ್ಕಳ ಬ್ಯಾಗ್ಗಳಲ್ಲಿ ಕಾಂಡೋಮ್, ಗರ್ಭ ನಿರೋಧಕ ಮಾತ್ರೆ, ಮದ್ಯ ಪತ್ತೆ 

ಬೆಂಗಳೂರು: ವಿವಿಧ ಶಾಲೆಗಳ ಮಕ್ಕಳ ಬ್ಯಾಗ್​ಗಳಲ್ಲಿ ಹಲವು ಆಘಾತಕಾರಿ ವಸ್ತುಗಳಿರುವುದು ಬೆಳಕಿಗೆ ಬಂದಿದ್ದು, ಶಾಲಾ ಸಿಬ್ಬಂದಿಯಲ್ಲಿ ಆಘಾತ ಉಂಟು ಮಾಡಿದೆ. ಮಕ್ಕಳ ಏಕಾಗ್ರತೆ ಮತ್ತು ಕಲಿಕೆಗೆ ಸ್ಮಾರ್ಟ್​ಫೋನ್​ಗಳಿಂದ ಭಂಗ ಬರುತ್ತಿದೆ.

ಇದೇ ಕಾರಣಕ್ಕೆ ಶಾಲೆಗಳಿಗೆ ಸ್ಮಾರ್ಟ್​ಫೋನ್ ತರುವಂತಿಲ್ಲ ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿರುವ ಹಲವು ಶಾಲೆಗಳು ವಿದ್ಯಾರ್ಥಿಗಳು ಮಕ್ಕಳ ಬ್ಯಾಗ್​ಗಳನ್ನು ತಪಾಸಣೆಗೆ ಒಳಪಡಿಸುತ್ತಿವೆ. ಈ ವೇಳೆ ಕೆಲ ಮಕ್ಕಳ ಬ್ಯಾಗ್​ಗಳಲ್ಲಿ ಸ್ಮಾರ್ಟ್​ಫೋನ್​ಗಳು, ಜೊತೆಗೆ ಕಾಂಡೋಮ್​ಗಳು, ಗರ್ಭನಿರೋಧಕ ಮಾತ್ರೆಗಳು, ಲೈಟರ್​ಗಳು, ಸಿಗರೇಟ್​ಗಳು, ಮತ್ತೇರಿಸುವ ವಾಸನೆ ಹೊಂದಿರುವ ವೈಟ್​ನರ್​ಗಳು ಮತ್ತು ಹೆಚ್ಚಿನ ಮೊತ್ತದ ನಗದು ಪತ್ತೆಯಾಗಿವೆ.

ಈ ಬೆಳವಣಿಗೆಯು ಹಲವು ಶಾಲೆಗಳ ಬೋಧಕ ಸಿಬ್ಬಂದಿಯಲ್ಲಿ ಆಘಾತ ಉಂಟು ಮಾಡಿದೆ. ತರಗತಿಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್ ತರುತ್ತಾರೆ, ಅದರಿಂದ ಕಿರಿಕಿರಿ ಆಗುತ್ತಿದೆ ಎಂದು ಶಿಕ್ಷಕರು ಇತ್ತೀಚೆಗೆ ದೂರು ನೀಡಿದ್ದರು.

ಈ ದೂರಿನ ಮೇರೆಗೆ ವಿದ್ಯಾರ್ಥಿಗಳ ಬ್ಯಾಗ್ಗಳನ್ನು ಪರಿಶೀಲಿಸುವಂತೆ ಕರ್ನಾಟಕ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ ತನ್ನ ಸದಸ್ಯ ಶಾಲೆಗಳಿಗೆ ಸೂಚಿಸಿತ್ತು.

ಪ್ರೌಢಶಾಲೆಗಳ 8, 9 ಮತ್ತು 10ನೇ ತರಗತಿಯ ಕೆಲ ವಿದ್ಯಾರ್ಥಿಗಳ ಬ್ಯಾಗ್ಗಳಲ್ಲಿ ಕಾಂಡೋಮ್ಗಳು, ಗರ್ಭ ನಿರೋಧಕ ಮಾತ್ರೆಗಳು, ಸಿಗರೇಟ್ಗಳು, ವೈಟ್ನರ್ಗಳು ಮುಂತಾದ ವಸ್ತುಗಳು ಸಿಕ್ಕಿವೆ. ನೀರಿನ ಬಾಟಲಿಗಳಲ್ಲಿ ಆಲ್ಕೋಹಾಲ್ ಇರುವುದೂ ಪತ್ತೆಯಾಗಿದೆ.

ಈ ವಿಷಯವನ್ನು ಈಗಾಗಲೇ ಶಿಕ್ಷಕರು ಸಂಬಂಧಪಟ್ಟ ಪಾಲಕರಿಗೆ ತಿಳಿಸಿದ್ದಾರೆ. ತಪ್ಪಿತಸ್ಥ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕುವ ಬದಲು ಅವರಿಗೆ ಕೌನ್ಸೆಲಿಂಗ್ ಕೊಡಿಸಲು ಶಾಲೆ ಆಡಳಿತ ಮಂಡಳಿಯವರು ಮತ್ತು ಪಾಲಕರು ಮುಂದಾಗಿದ್ದಾರೆ.

10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳ ಬ್ಯಾಗ್ನಲ್ಲಿ ಕಾಂಡೋಮ್ ಸಿಕ್ಕಿದೆ. ಶಿಕ್ಷಕರು ಕೇಳಿದಾಗ, ಇದು ನನ್ನದಲ್ಲ, ಫ್ರೆಂಡ್ದು ಎಂದು ಕುಂಟು ನೆಪ ಹೇಳಿದ್ದಾಳೆ. ಈ ವಿಷಯವನ್ನು ಕಾಮ್ಸ್ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಧೃಢಪಡಿಸಿದ್ದಾರೆ.

Related News

ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ವಂದೇ ಭಾರತ್ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಅಸ್ಸಾಂನ ಗುವಾಹಟಿಗೆ ಹೊರಟಿದೆ. ಈ...

ಮಣಿಪುರದಲ್ಲಿ ಮತ್ತೆ ತಲೆ ಎತ್ತಿದ ಹಿಂಸಾಚಾರ ಪೊಲೀಸ್‌ ಸೇರಿದಂತೆ ಐವರು ಸಾವು

ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -