spot_img
spot_img
spot_img
spot_img
spot_img
spot_img
spot_img
spot_img
spot_img
26.1 C
Belagavi
Friday, September 22, 2023
spot_img

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ನಿರಂತರ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ನಂಜನಗೂಡು: ಚುನಾವಣೆ ಪೂರ್ವ ಕಾಂಗ್ರೆಸ್ ಘೋಷಿಸಿದ್ದ ಯೋಜನೆಗಳು ನಿರಂತರವಾಗಿರಲಿವೆ. ನುಡಿದಂತೆ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರ ಅಲ್ಪ ಅವಧಿಯಲ್ಲೆ ಜನಮನ್ನಣೆ ಗಳಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಚಾಲನಾ ಸಮಾರಂಭದ ಹಿನ್ನೆಲೆಯಲ್ಲಿ ನಂಜನಗೂಡಿನ ಪ್ರವಾಸಿ ಮಂದಿರದಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಪ್ರತಿಯೊಬ್ಬ ಮಹಿಳೆಯರು ನಾನು ಯಜಮಾನಿ ಎನ್ನುವ ಅವಕಾಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿಕೊಟ್ಟಿದ್ದಾರೆ ಎಂದರು. ಮೈಸೂರಿನಲ್ಲಿ ನಡೆಯಲಿರುವ ಗೃಹ ಲಕ್ಷ್ಮಿ ಯೋಜನೆಯ ಚಾಲನಾ ಸಮಾರಂಭದ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು ಎಂದರು.

ಅಂಗನವಾಡಿ ಕಾಯಕರ್ತೆಯರ ಸಮಸ್ಯೆಗೆ ಪರಿಹಾರ*
ಕೊರೊನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ಅಂಗನವಾಡಿ, ಆಶಾ ಕಾರ್ಯಕರ್ತೆಯರು ತಮ್ಮ ಕೆಲಸ ನಿರ್ವಹಿಸಿದರು. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಗೃಹಲಕ್ಷ್ಮಿ ಯೋಜನೆಯ ಕಾರ್ಯಕ್ರಮ ಮುಕ್ತಾಯಗೊಂಡ ಬಳಿಕ ಅಂಗನವಾಡಿ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ನೀಡುವುದಾಗಿ ಹೇಳಿದರು.

ಧ್ರುವನಾರಾಯಣ್ ಸ್ಮರಿಸಿದ ಸಚಿವರು: ಭಾಷಣದ ಆರಂಭದಲ್ಲಿ ದಿವಂಗತ ಧ್ರುವನಾರಾಯಣ್ ಅವರನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಮರಿಸಿದರು. ಧ್ರುವನಾರಾಯಣ್ ಅವರು ಸಂಘಟಕ ರಾಗಿದ್ದರು, ಅವರ‌‌ ಮಗ ದರ್ಶನ್ ತಂದೆ ಸ್ಥಾನವನ್ನು ತುಂಬುತ್ತಿದ್ದು, ಕ್ಷೇತ್ರದ ಜನರಲ್ಲಿ ತಮ್ಮ ತಂದೆ ತಾಯಿಯನ್ನು ಕಾಣುತ್ತಿದ್ದಾರೆ ಎಂದರು. ದರ್ಶನ್ ನನ್ನ ಮಗನಿಗಿಂತಲೂ ಮೂರು ತಿಂಗಳು ಚಿಕ್ಕವನಾಗಿದ್ದು, ದರ್ಶನ್ ನನಗೆ ಮಗನ ಸಮಾನ ಎಂದರು.

ಈ ವೇಳೆ ನಂಜನಗೂಡು ಶಾಸಕ ದರ್ಶನ್,‌ ತಹಸಿಲ್ದಾರ್ ಶಿವಕುಮಾರ್ ಕಾಸನೂರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Related News

ಬೆಳಗಾವಿ ಜಿಲ್ಲೆಯಲ್ಲಿ 14 ಗ್ರಾ.ಪಂಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ. ಖಾನಾಪುರ – ಬೇಕವಾಡ, ಕಿತ್ತೂರು –...

ಚಂದ್ರಯಾನ-3 ಮೇಲೆ ಇಸ್ರೋ ಕಣ್ಣು ಇಂದು ಎಚ್ಚೆತ್ತುಕ್ಕೊಳ್ಳುತ್ತಾ ಲ್ಯಾಂಡರ್ ಮತ್ತು ರೋವರ್

ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -