spot_img
spot_img
spot_img
28.1 C
Belagavi
Thursday, September 29, 2022
spot_img

ರಮೇಶ್ ಜಾರಕಿಹೊಳಿ 660 ಕೋಟಿ ಸಾಲ ಮಾಡಿದ್ದಾರೆ : ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ಆರೋಪ

spot_img

ಬೆಂಗಳೂರು: ನೀರವ್ ಮೋದಿ, ವಿಜಯ್ ಮಲ್ಯ, ಮುಕುಲ್ ಚೋಕ್ಸಿ ಯಾವ ರೀತಿ ಹಗರಣದ ಮಾದರಿಯಲ್ಲಿಯೇ ಮಹಾ ವಂಚನೆಯನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ಸೌಭಾಗ್ಯ ಲಕ್ಷ್ಮಿ ಶುಗರ್ ಎಂಬ ಸಕ್ಕರೆ ಕಾರ್ಖಾನೆ ಇದ್ದು, ಇದರ ಮಾಲೀಕ ರಮೇಶ್ ಜಾರಕಿಹೊಳಿ ಅಪೆಕ್ಸ್ ಬ್ಯಾಂಕ್​​ಗಳಲ್ಲಿ ಒಳಪಡುವ ಸುಮಾರು 15 ಬ್ಯಾಂಕ್​​ಗಳಿಂದ 366 ಕೋಟಿ ಸಾಲ ಮಾಡಿದ್ದಾರೆ.

ಅಷ್ಟೇ ಅಲ್ಲದೇ ಯೂನಿಯನ್ ಬ್ಯಾಂಕ್​​ನಿಂದ 20 ಕೋಟಿ, ತೆರಿಗೆ ಇಲಾಖೆಯಿಂದ 200 ಕೋಟಿ ಬಾಕಿ ಉಳಿಸಿಕೊಂಡಿದ್ದು, ಹರಿಯಂತ್ ಬ್ಯಾಂಕ್​​ನಿಂದ 20 ಕೋಟಿ ಸೇರಿ ಒಟ್ಟು 660 ಕೋಟಿ ಸಾಲ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಇದರ ಯಾವ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು.

spot_img

Related News

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -