ನವದೆಹಲಿ : ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಭೀಕರ ಸೋತಿದೆ. ಇದರಿಂದ ಕಾಂಗ್ರೆಸ್ ತೀವ್ರ ಮುಖಭಂಗಕ್ಕೊಳಗಾಗಿದೆ. ಹೀಗಾಗಿ ಸೋನಿಯಾ ಗಾಂಧಿ ಮಹತ್ವದ ಹೆಜ್ಜೆ ಇಟ್ಟಿದ್ದು ಬರೋಬ್ಬರಿ ಐದು ರಾಜ್ಯಗಳ ಅಧ್ಯಕ್ಷರಿಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ.
ಪಂಜಾಬ್, ಉತ್ತರಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ಅಧ್ಯಕ್ಷರು ರಾಜೀನಾಮೆ ನೀಡುವಂತೆ ಸೋನಿಯಾ ಗಾಂಧಿ ಸೂಚನೆ ನೀಡಿದ್ದಾರರೆ. ಈ ಬಗ್ಗೆ ಮುಖಂಡ ರಂದೀಪ್ ಸುರ್ಜೇವಾಲ್ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಕಳೆದ ಭಾನುವಾರ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಕೆಲ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದರ ಬೆನ್ನಲ್ಲೇ ಸೋಲು ಕಂಡಿರುವ ಐದು ರಾಜ್ಯಗಳ ಕಾಂಗ್ರೆಸ್ ಮುಖ್ಯಸ್ಥರು ರಾಜೀನಾಮೆ ನೀಡಲು ಸೂಚಿಸಿದ್ದಾರೆ.