ಬೆಳಗಾವಿ : ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಳಗಾವಿ ಪೊಲೀಸ್ ಆಯುಕ್ತರ ನೂತನ ಕಚೇರಿ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು, ಪೊಲೀಸ್ ಗೃಹ ಮಂಡಳಿಯಿಂದ ರಾಜ್ಯಾದ್ಯಂತ ಒಳ್ಳೆಯ ಕೆಲಸ ಆಗುತ್ತಿದೆ.
ರಾಜ್ಯದಲ್ಲಿ 2500 ಪೊಲೀಸ್ ಮನೆಗಳನ್ನು ನಿರ್ಮಾಣ ಮಾಡುತ್ತಿದ್ದು, ಈಗಾಗಲೇ 16 ಪೊಲೀಸ್ ಠಾಣೆ ನಿರ್ಮಾಣದ ಹಂತದಲ್ಲಿವೆ. ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. 300 ಜೀಪ್ ಹಾಗೂ ಸ್ಕಾರ್ಪಿಯೊ ಖರೀದಿ ಮಾಡಲಾಗುತ್ತಿದೆ. ಡಿವೈಎಸ್ಪಿಗಳಿಗೆ ಸ್ಕಾರ್ಪಿಯೊ ವಾಹನಗಳನ್ನು ನೀಡಲಾಗುತ್ತಿದೆ ಎಂದರು.