spot_img
spot_img
spot_img
21.1 C
Belagavi
Friday, September 30, 2022
spot_img

ಬೆಳಗಾವಿ: ಮುಂದುವರೆದ ಹಿಜಾಬ್ ವಿವಾದ: ಪೊಲೀಸರೊಂದಿಗೆ ವಾಗ್ವಾದ

spot_img

ಬೆಳಗಾವಿ: ಮಂಗಳವಾರವೂ ನಗರದ ಸರ್ದಾರ್ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಶಾಲೆಗೆ ಹಾಜರಾದರು. ಹಿಜಾಬ್ ಹಾಕಿಕೊಂಡು ಬಂದವರನ್ನು ಪ್ರತ್ಯೇಕ ಕೊಠಡಿಗೆ ಕರೆದುಕೊಂಡು ಹೋದ ಸಿಬ್ಬಂದಿ, ಅಲ್ಲಿ ಹಿಜಾಬ್ ತೆಗೆಸಿ ಶಾಲೆಯ ತರಗತಿ ಕೊಠಡಿಗೆ ಕಳುಹಿಸಿದರು.

ಇನ್ನು ಕೆಲ ವಿದ್ಯಾರ್ಥಿನಿಯರು ಹಿಜಾಬ್ ತೆಗೆಯುವುದಕ್ಕೆ ವಿರೋಧ ವ್ಯಕ್ತಪಡಿಸಿದರು.ಅಷ್ಟೇ ಅಲ್ಲದೇ ಶಿಕ್ಷಕಿ ಕೂಡ ಹಿಜಾಬ್ ಧರಿಸಿಯೇ ಪ್ರವೇಶಿಸಿದರು. ಈ ನಡುವೆ, ಶಾಲೆಗ ಬಂದ ಸಾಮಾಜಿಕ ಹೋರಾಟಗಾರ್ತಿ ಸೀಮಾ ಇನಾಮದಾರ್ , ಹಿಜಾಬ್ ತೆಗೆಸುತ್ತಿದ್ದ ಕ್ರಮದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದರು.

ಈ ವೇಳೆ ಪೊಲೀಸರೊಂದಿಗೆ ವಾಗ್ವಾದವನ್ನೂ ನಡೆಸಿದರು. ಇದರಿಂದ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಇನ್ನು ಘಟನೆ ಬಳಿಕ ಬೆಳಗಾವಿ ಡಿಸಿಪಿ ರವೀಂದ್ರ ಗಡಾದಿ ಶಾಲೆಗೆ ಭೇಟಿ ನೀಡಿ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡರು.

spot_img

Related News

ಕೊಲೆಯಾದ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರಿ 

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ...

ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ಧಿಡೀರ್ ದಾಳಿ

ಬೆಂಗಳೂರು : ರಾಜ್ಯದ ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ತಂಡ ಇಂದು ಧಿಡೀರ್ ದಾಳಿ ನಡೆಸಿದೆ. ವಾಹನ ಸವಾರರಿಂದ ಹಣ ವಸೂಲಿ ದೂರುಗಳು ಕೇಳಿ ಬಂದ ಹಿನ್ನೆಲೆ ಕಲಬುರಗಿ, ಬೀದರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -