spot_img
spot_img
spot_img
21.3 C
Belagavi
Sunday, October 1, 2023
spot_img

ಚಂದ್ರಯಾನ 3 ಲ್ಯಾಂಡರ್​ಗೆ ಕೌಂಟ್ ಡೌನ್ ಆರಂಭ

ಬೆಂಗಳೂರು: ಭಾರತದ ಮಹತ್ವದ ಯೋಜನೆಯಾದ ಚಂದ್ರಯಾನ-3 ತನ್ನ ಗುರಿಯನ್ನ ಭಾಗಶಃ ತಲುಪಿದೆ. ಚಂದ್ರಯಾನ-3 ಮತ್ತು ಚಂದ್ರಯಾನ-2 ಆರ್ಬಿಟರ್ ಮಧ್ಯೆ ಸಂವಹನ ಕಾರ್ಯ ಜೋಡಿಸುವ ಕೆಲಸ ಯಶಸ್ವಿಯಾಗಿದೆ. ಚಂದ್ರಯಾನ-2 ಆರ್ಬಿಟರ್ ವಾಹನವು ಚಂದ್ರಯಾನ 3 ಸ್ವಾಗತಿಸಿದೆ. ಇಬ್ಬರ ದ್ವಿಮುಖ ಸಂವಹನ ಯಶಸ್ವಿಯಾಗಿ ನಡೆದಿದೆ ಎಂದು ಇಸ್ರೋ ಬಿಗ್ ಅಪ್‌ಡೇಟ್ ಕೊಟ್ಟಿದೆ. ನಾಳೆ(ಆಗಸ್ಟ್ 23) ಚಂದ್ರಯಾನ 3ನ ವಿಕ್ರಮ್ ಲ್ಯಾಂಡರ್‌ ಚಂದ್ರನ ದಕ್ಷಿನ ಧ್ರುವದ ಭಾಗದಲ್ಲಿ ಇಳಿಯಲಿದೆ. ಸರಿಯಾಗಿ ನಾಳೆ ಸಂಜೆ 6 ಗಂಟೆ 4 ನಿಮಿಷಕ್ಕೆ ಚಂದ್ರ ಮೇಲೆ ಲ್ಯಾಂಡ್ ಆಗಲಿದೆ. ಲ್ಯಾಂಡಿಂಗ್ ಕ್ಷಣವನ್ನ ಇಡೀ ಜಗತ್ತಿಗೆ ತಿಳಿಸಲು ಇಸ್ರೋ ಲೈವ್ ವ್ಯವಸ್ಥೆ ಕೂಡ ಮಾಡಿದೆ. ಈ ಮೂಲಕ ಇತಿಹಾಸ ಬರೆಯಲು ಭಾರತದ ಇಸ್ರೋ ಎಲ್ಲಾ ರೀತಿ ಸಿದ್ಧತೆ ನಡೆಸಿದೆ. ಇದು ಯಶಸ್ವಿಯಾದರೆ ಚಂದ್ರನ ಮೇಲೆ ಲ್ಯಾಂಡರ್‌ ಇಳಿಸಿದ ಜಗತ್ತಿನ ನಾಲ್ಕನೇ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಲಿದೆ. ಈಗಾಗಲೇ ಅಮೆರಿಕ, ರಷ್ಯಾ ಮತ್ತು ಚೀನಾ ದೇಶಗಳು ಈ ಕೀರ್ತಿಗೆ ಪಾತ್ರವಾಗಿವೆ.

ವಿಜ್ಞಾನಿಗಳಿಗೆ ಕುತೂಹಲ ಕೆರಳಿಸಿರುವ ಚಂದ್ರನ ಭಾಗವೆಂದರೆ ಅದು ದಕ್ಷಿಣ ಧ್ರುವ ಮಾತ್ರ. ಏಕೆಂದರೆ ಚಂದ್ರನ ದಕ್ಷಿಣ ಧ್ರುವ ವಿಸ್ಮಯಗಳ ಖಜಾನೆ ಇದ್ದಂತೆ. ಈ ಭಾಗದಲ್ಲಿ ಉಷ್ಣಾಂಶ ಮೈನಸ್ 230 ಡಿಗ್ರಿಗಿಂತ ಕಡಿಮೆ ಇದೆ. ಬೆಳಕನ್ನೇ ಕಾಣದ ಎಷ್ಟೊಂದು ಪ್ರದೇಶಗಳು ಇಲ್ಲಿವೆ. ಇದೀಗ ಭಾರತ ಕೂಡ ದಕ್ಷಿಣ ಧ್ರುವದಲ್ಲೇ ವಿಕ್ರಮ್ ಲ್ಯಾಂಡರ್ ಇಳಿಸಲು ತೀರ್ಮಾನಿಸಿದೆ.. ಕಳೆದ ಬಾರಿ ಚಂದ್ರಯಾನ2ನಲ್ಲಿ ಚಂದ್ರನ ಮೇಲೆ ಲ್ಯಾಂಡರ್ ಇಳಿಸುವಾಗ ಸ್ವಲ್ಪ ಎಡವಟ್ಟಾಗಿತ್ತು. ಇದೇ ಕಾರಣಕ್ಕೆ ಈ ಬಾರಿ ಎಚ್ಚರಿಕೆ ವಹಿಸಲಾಗಿದೆ. ಲ್ಯಾಂಡರ್ ಇಳಿಸುವ ಪ್ರತಿಕ್ಷಣ ಇಸ್ರೋಗೆ ಗೊತ್ತಾಗಲಿದೆ. ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾ ವಿಕ್ರಮ್‌ಗೆ ಸರಿಯಾದ ಲ್ಯಾಂಡಿಂಗ್ ಸ್ಥಳ ತೋರಿಸುತ್ತೆ. ಹಾಗೂ ಲ್ಯಾಂಡರ್‌ನ ಅಪಾಯ ಪತ್ತೆ ಮತ್ತು ಅಪಾಯ ತಪ್ಪಿಸುವ ಕ್ಯಾಮರಾ ಕೂಡ ಇದರಲ್ಲಿದೆ. ಜೊತೆಗೆ ಲೇಸರ್ ಆಲ್ಟಿಮೀಟರ್ (LASA), ಲೇಸರ್ ಡಾಪ್ಲರ್ ವೆಲಾಸಿಟಿಮೀಟರ್ (LDV) & ಲ್ಯಾಂಡರ್ ಹಾರಿಜಾಂಟಲ್ ವೆಲಾಸಿಟಿ ಕ್ಯಾಮೆರಾ (LHVC) ಈ ಪೇಲೋಡ್‌ ಒಟ್ಟಿಗೆ ಕೆಲಸ ಮಾಡುತ್ತದೆ.

ಚಂದ್ರಯಾನ-3 ಗಗನನೌಕೆಯು ಚಂದ್ರನ ಸನಿಹದಿಂದ ಫೋಟೋಗಳನ್ನು ಕ್ಲಿಕ್ಕಿಸಿದೆ. ವಿಕ್ರಮ್ ಲ್ಯಾಂಡರ್ ಕ್ಲಿಕ್ಕಿಸಿದ ಈ ಫೋಟೋಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಭೂಮಿಗೆ ಕಾಣಿಸದ ಚಂದ್ರನ ಮತ್ತೊಂದು ಮುಖ ಕಾಣಿಸಿದೆ. ಚಂದ್ರನ ಮಗ್ಗಲಿನಲ್ಲಿ ಸಾಕಷ್ಟು ಕುಳಿಗಳು ಇರುವುದು ಫೋಟೋದಲ್ಲಿ ಕಂಡು ಬಂದಿದೆ. ಲ್ಯಾಂಡರ್ ಹಜಾರ್ಡ್ ಡಿಟೆಕ್ಷನ್ ಆಂಡ್‌ ಅವಾಯಿಡೆನ್ಸ್ ಕ್ಯಾಮೆರಾ ಮೂಲಕ ಈ ಚಿತ್ರಗಳನ್ನು ಸೆರೆಹಿಡಿಯಲಾಗಿದೆ.

Related News

ಸರಕಾರದ ಜೊತೆ ಎಲ್ಲ ಸಮಾಜದವರೂ ಇದ್ದಾರೆ – ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...

ನಿಮ್ಮ ಆಸ್ತಿಗಳ ಮೌಲ್ಯಗಳನ್ನು ಅಪಮೌಲ್ಯ ಮಾಡಬೇಡಿ ನೈಜ್ಯ ಬೆಲೆಗೆ ವ್ಯವಹಾರ ಮಾಡಿ

ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ. ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -