ಬೆಳಗಾವಿ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಪ್ರಾರಂಭವಾಗಿದ್ದು ರಾಜಕೀಯದಲ್ಲಿ ಸಂಚಲನ ಮೂಡಿಸುವ ಬೆಳಗಾವಿಯಲ್ಲು ಮತ ಎಣಿಕೆ ಪ್ರಾರಂಭವಾಗಿದೆ. ಇದೀಗ ಪೋಸ್ಟಲ್ ಬ್ಯಾಲೆಟ್ ಪೇಪರ್ ಎಣಿಕೆ ಕಾರ್ಯ ನಡೆಯುತ್ತಿದ್ದು ಮುಗಿದ ತಕ್ಷಣ ಇವಿಎಮ್ ಮತ ಎಣಿಕೆ ಪ್ರಾರಂಭವಾಗಲಿದೆ.
ಬೆಳಗಾವಿಯ ಒಟ್ಟು 18 ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬೆಳಗಾವಿ ನಗರದ ಆರ್ ಪಿ ಡಿ ಮಹಾ ವಿದ್ಯಾಲಯದಲ್ಲಿ ನಡೆಯುತ್ತಿದೆ. ಈಗಾಗಲೇ ಅಧಿಕಾರಿಗಳು ಮತ ಎಣಿಕೆ ಕೇಂದ್ರದಲ್ಲಿದ್ದು ಸೂಕ್ತ ಭದ್ರತೆಯೊಂದಿದೆ ಮತ ಎಣಿಕೆ ಪ್ರಾರಂಭಿಸಿದ್ದಾರೆ.