spot_img
spot_img
spot_img
spot_img
spot_img
spot_img
spot_img
20.5 C
Belagavi
Sunday, December 10, 2023
spot_img

ಶಾಸಕ ಅಭಯ್‌ ಪಾಟೀಲ ವಿರುದ್ಧ ಸಿಡಿದೆದ್ದ ದಲಿತ ಸಂಘಟನೆಗಳು

ಬೆಳಗಾವಿ: ಮಹಾನಗರ ಪಾಲಿಕೆಯಲ್ಲಿ ದಲಿತ ಸಮುದಾಯದ ಅಧಿಕಾರಿಗಳಿಗೆ ದಕ್ಷಿಣ ಕೇತ್ರದ ಬಿಜೆಪಿ ಶಾಸಕ ಅಭಯ್‌ ಪಾಟೀಲ ನಿತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿವಿಧ ದಲಿತ ಸಂಘಟನೆಗಳು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಪಾಲಿಕೆ ಎದುರು ಬುಧವಾರ ಬೃಹತ್‌ ಪ್ರತಿಭಟನೆ ನಡೆಸಿದರು.

 

ಬೆಳಗಾವಿ ದಕ್ಷಿಣ ಶಾಸಕ ಅಭಯ್‌ ಪಾಟೀಲ ಪಾಲಿಕೆ ಆಯುಕ್ತ ಅಶೋಕ ದುಡಗುಂಟೆ ಅವರಿಗೆ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ ದಲಿತ ಸಂಘಟನೆಗಳ ಮುಖಂಡರು ಪಾಲಿಕೆ ಎದುರು ಹಲಗೆ ಹೊಡೆಯುತ್ತಾ ಶಾಸಕ ಅಭಯ್‌ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.

ಈ ವೇಳೆ ದಲಿತ ಸಂಘಟನೆ ಮುಖಂಡ ಮಲ್ಲೇಶ ಚೌಗಲೆ ಮಾತನಾಡಿ, ಪಾಲಿಕೆಯಲ್ಲಿರುವ ದಲಿತ ಅಧಿಕಾರಗಳಿಗೆ ಶಾಸಕ ಅಭಯ್‌ ಪಾಟೀಲ ನಿತ್ಯ ಕಿರುಕುಳ ನೀಡುತ್ತಿದ್ದಾರೆ. ಅಲ್ಲದೇ ಪಾಲಿಕೆಯಲ್ಲಿ ಸುಕಾ ಸುಮ್ಮನೆ ಹಸ್ತಕ್ಷೇಪ ಮಾಡುತ್ತಿದ್ದಾರೆ. ಇಲ್ಲ ಸಲ್ಲದ ಆರೋಪಗಳನ್ನು ದಲಿತ ಅಧಿಕಾರಿಗಳ ಮೇಲೆ ಹಾಕುತ್ತಿದ್ದಾರೆ. ಶೀಘ್ರವೇ ಸರ್ಕಾರ ಈ ಬಿಜೆಪಿ ಶಾಸಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.


ಪಾಲಿಕೆಯಲ್ಲಿ ಅಧಿಕಾರಿಗಳು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಆದರೆ ಶಾಸಕ ಅಭಯ್‌ ಪಾಟೀಲ ಪ್ರಾಮಾಣಿಕ ಅಧಿಕಾರಿಗಳ ವಿರುದ್ಧ ಪಿತೂರಿ ನಡೆಸಿ ತಮ್ಮ ಬೆಳೆ ಬೆಯಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ತೆರಿಗೆ ಪರಿಷ್ಕರಣೆ ವಿಚಾರ ಸಂಬಂಧ ಪಾಲಿಕೆ ಆಯುಕ್ತರನ್ನು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಬ್ಲಾಕ್‌ಮೇಲ್‌ ತಂತ್ರ ಮಾಡುತ್ತಿದ್ದಾರೆ ಎಂದು‌ ಅವರು ಮೇಯರ್‌ ಶೋಭಾ ಸೋಮನಾಚೆ ಶಾಸಕ ಅಭಯ ಪಾಟೀಲರ ಕೈಗೊಂಬೆಯಾಗಿದ್ದಾರೆ ಎಂದು ಆರೋಪಿಸಿದರು.

ಪಾಲಿಕೆ ಈ ಆಯುಕ್ತರು ನನ್ನ ಮಾತುಕೇಳಬೇಕು. ಅವರನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಸಣ್ಣ ತಪ್ಪನ್ನು ಪಾಟೀಲ ದೊಡ್ಡದಾಗಿ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಅನಾವಶ್ಯಕವಾಗಿ ತೌಡು ಕುಟ್ಟುವ ಕೆಲಸ ಮಾಡಿದ್ದಾರೆ. ತೆರಿಗೆ ಪರಿಷ್ಕರಣೆ ಪ್ರಕರಣದ ಕುರಿತು ತನಿಖೆಯಾಗಬೇಕು. ಈ ಕಡತಕ್ಕೆ ಮೇಯರ್‌ ಸಹಿಯೂ ಇದೆಯೋ? ಇಲ್ಲವೋ? ಎನ್ನುವುದು ಸಿಓಡಿ ಇಲ್ಲವೇ ಸಿಐಡಿ ತನಿಖೆಗೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ದಲಿತ ಅಧಿಕಾರಿಗಳಿಗೆ ನಿತ್ಯ ಕಿರುಕುಳ ನೀಡುತ್ತಿರುವ ಶಾಸಕ ಅಭಯ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಶಾಸಕ ರಾಜು ಸೇಠ್‌, ಆರ್ಮ ಆದ್ಮಿ ಮುಖಂಡ ರಾಜು ಟೋಪಣ್ಣವರ, ಸಮಾಜ ಸೇವಕ ಸುಜೀತ್‌ ಮುಳುಗುಂದ, ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪ್ರದೀಪ ಎಂ. ಜೆ.ಕಾರ್ತೀಕ ಪಾಟೀಲ, ಬಸವರಾಜ ಶಿಗಾವಿ, ರಾಮಣ್ಣ ಗುಳ್ಳಿ, ರಾಜು ತಳವಾರ, ಸಿದ್ದಕ್ಕಿ ಅಂಕಲಗಿ, ಎಸ್ಸಿ-ಎಸ್ಟಿ ದೌರ್ಜನ್ಯ ಸಮಿತಿಯ ಸದಸ್ಯ ವಿಜಯ ತಳವಾರ, ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ರಮಾಕಾಂತ ಕೂಂಡಸ್ಕರ್‌, ಜಿಲ್ಲಾ ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ಕಲ್ಪನಾ ಜೋಶಿ, ಆಯಿಷಾ ಸನದಿ ಸೇರಿದಂತೆ ದಲಿತ ಸಂಘಟನೆಯ ನೂರಾರು ಕಾರ್ಯಕರ್ತರು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಚಿವ ಜಾರಕಿಹೊಳಿ: ಪಾಲಿಕೆ ಎದುರು ಶಾಸಕ ಅಭಯ್‌ ಪಾಟೀಲ ವಿರುದ್ಧ ದಲಿತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸಚಿವ ಸತೀಶ ಜಾರಕಿಹೊಳಿ ಆಗಮಿಸಿದರು. ಈ ವೇಳೆ ಸಚಿವ‌ ಸತೀಶ್‌ರಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಬೆಂಬಲಿಗರು ಸ್ವಾಗತ ಕೋರಿದರು. ಸಚಿವರನ್ನು ಭೇಟಿ ಮಾಡಿದ ದಲಿತ ಸಮುದಾಯದ ಮುಖಂಡರು ತಮ್ಮ ಸಮುದಾಯಕ್ಕೆ ಆಗುಮ ಅನ್ಯಾಯವನ್ನು ಏಳೆ ಏಳೆಯಾಗಿ ಅವರ ಮುಂದೆ ಬಿಚ್ಚಿದ್ದರು. ದಲಿತ ಸಮುದಾಯದವರ ಸಮಸ್ಯೆಗೆ ಸ್ಫಂದಿಸಿದ ಸಚಿವ ಜಾರಕಿಹೊಳಿ ಅವರು, ಶೀಘ್ರವೇ ಪಾಲಿಕೆಯಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಬೆಳಗಾವಿ ನಗರ ಪಾಲಿಕೆ ಆಸ್ತಿ ತೆರಿಗೆ ಪರಿಷ್ಖರಣೆ ಗೊತ್ತುವಳಿ ಕಾಣೆಯಾಗಿರುವ ಕುರಿತು ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

Related News

ಡಿ.15ರ ವರೆಗೆ ಬೆಳಗಾವಿ ಕೋಟೆ ಕೆರೆಯಲ್ಲಿ ಜಲ ಸಾಹಸ ಕ್ರೀಡಾ ಯೋಜನೆ

ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ‌ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...

ಜಾತ್ರೆ ಹಿನ್ನೆಲೆಯಲ್ಲಿ ಬೆನಕನಹಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...

Latest News

- Advertisement -
- Advertisement -
- Advertisement -
- Advertisement -