spot_img
spot_img
spot_img
28.1 C
Belagavi
Thursday, September 29, 2022
spot_img

ಹಿರಿಯ ನಾಗರಿಕರ ಹಿತರಕ್ಷಣೆಗೆ ಸಹಾಯವಾಣಿ: ಡಿಸಿ ಹಿರೇಮಠ ಭರವಸೆ

spot_img

ಬೆಳಗಾವಿ : ಸಮಾಜದಲ್ಲಿ ನೊಂದ, ನಿರ್ಲಕ್ಷಿತ, ನಿರ್ಗತಿಕ ಹಾಗೂ ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾಗುವ ಹಿರಿಯ ನಾಗರಿಕರ ಹಿತರಕ್ಷಣೆಯ ನಿಟ್ಟಿನಲ್ಲಿ ಹಿರಿಯ ನಾಗರಿಕರ ಸಂಘದ ಜತೆಗೂಡಿ ಜಿಲ್ಲಾಮಟ್ಟದಲ್ಲಿ ಪ್ರತ್ಯೇಕ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸುವ ಕುರಿತು ಪರಿಶೀಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಭರವಸೆಯನ್ನು ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ (ಫೆ.11) ನಡೆದ ಹಿರಿಯ ನಾಗರಿಕರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಕ್ಕಳಿಗೆ ಆಸ್ತಿ ವರ್ಗಾವಣೆ ಮಾಡಿದ‌ ಬಳಿಕ ಒಂದು ವೇಳೆ ಮಕ್ಕಳು ಸರಿಯಾಗಿ ತಂದೆ-ತಾಯಂದಿರ ಪಾಲನೆ-ಪೋಷಣೆ ಮಾಡದಿದ್ದರೆ ಆಸ್ತಿಯನ್ನು ತಂದೆ-ತಾಯಂದಿರಿಗೆ ಮರಳಿ ಪಡೆಯಲು ಕಾಯ್ದೆಯಲ್ಲಿ ಅವಕಾಶಗಳಿವೆ. ನೊಂದ ಪಾಲಕರು ಬಿಳಿಹಾಳೆಯ ಮೇಲೆ ದೂರು ನೀಡಿದರೂ ಸಾಕು ಸಂಬಂಧಿಸಿದ ಉಪ ವಿಭಾಗಾಧಿಕಾರಿಗಳು ಆದ್ಯತೆ ಮೇರೆಗೆ ಪ್ರಕರಣವನ್ನು ವಿಚಾರಣೆ ನಡೆಸಿ ನ್ಯಾಯ ಒದಗಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭರವಸೆ ನೀಡಿದರು.

ಆಸ್ಪತ್ರೆಗಳು ಹಾಗೂ ಇತರೆ ಸರಕಾರಿ ಕಚೇರಿಗಳಿಗೆ ಹಿರಿಯ ನಾಗರಿಕರು ಬಂದಾಗ ಅವರ ಕೆಲಸಗಳನ್ನು ಆದ್ಯತೆ ಮೇರೆಗೆ ಮಾಡಿಕೊಡಬೇಕು. ವಾರದಲ್ಲಿ ಕನಿಷ್ಟ ಒಂದು ದಿನವಾದರೂ ಬ್ಯಾಂಕುಗಳಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ ಸೇವಾ ಕೌಂಟರ್ ಆರಂಭಿಸಲು ಸಂಬಂಧಿಸಿದವರಿಗೆ ನಿರ್ದೇಶನ ನೀಡಲಾಗುವುದು. ಸಾಮಾಜಿಕ ಭದ್ರತಾ ಪಿಂಚಣಿ ಸೌಲಭ್ಯ ಪಡೆಯುತ್ತಿರುವವರ ಅನುಕೂಲಕ್ಕಾಗಿ ಸರಕಾರ ಹೊಸ ತಂತ್ರಜ್ಞಾನ ವ್ಯವಸ್ಥೆಯ ಮೂಲಕ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಅಕೌಂಟ್ ಗೆ ಪಿಂಚಣಿ ಪಾವತಿಸಲಾಗುತ್ತಿದೆ.

ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ಸ್ಥಾಪಿಸಲು ನಿರ್ದೇಶನ:

ಬಿಮ್ಸ್ ಸೇರಿದಂತೆ ಜಿಲ್ಲೆಯ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕವಾದ ಜಿರೆಟಿಕ್ ವಾರ್ಡ್ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ಸೂಚನೆ ನೀಡಿದರು. ಹಿರಿಯ ನಾಗರಿಕರ ಇಲಾಖೆಯ ವತಿಯಿಂದ ನೀಡಲಾಗಿರುವ ಗುರುತಿನ ಚೀಟಿಗಳನ್ನು ಸಾರಿಗೆ ಸಂಸ್ಥೆ ಪರಿಗಣಿಸಬೇಕು. ಈ ನಿಟ್ಟಿನಲ್ಲಿ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ತಿಳಿಸಿದರು.

ನಿರ್ಗತಿಕ ಹಿರಿಯ‌ ನಾಗರಿಕರಿಗೆ ಆಶ್ರಯ ಒದಗಿಸುವುದು; ದೌರ್ಜನ್ಯಕ್ಕೆ ಒಳಗಾದವರ ರಕ್ಷಣೆ; ಕಾನೂನು ನೆರವು ಸೇರಿದಂತೆ ವಿವಿಧ ಬಗೆಯ ನೆರವು ನೀಡುವ ಕೆಲಸವನ್ನು ಸಹಾಯವಾಣಿ(14567) ಮೂಲಕ ಮಾಡಲಾಗುತ್ತಿದೆ. ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜ ವರವಟ್ಟಿ, ಹಿರಿಯ ನಾಗರಿಕರಾದ ಮಲ್ಲೇಶಪ್ಪ ಚೌಗಲೆ ಮತ್ತಿತರರು ಉಪಸ್ಥಿತರಿದ್ದರು.

spot_img

Related News

ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂ.ಗಳ ಪರಿಹಾರ : ಸಿಎಂ ಬೊಮ್ಮಾಯಿ 

ಹಾವೇರಿ : ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂಪಾಯಿಗಳ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗದ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು ಹಾವೇರಿಯ ಗುರುಭವನದಲ್ಲಿ ಹಾವೇರಿ...

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -