spot_img
spot_img
spot_img
28.1 C
Belagavi
Thursday, September 29, 2022
spot_img

ಅಂಬೇಡ್ಕರ್ ಜಯಂತಿ ಅರ್ಥಪೂರ್ಣ ಆಚರಣೆ : ಅಗತ್ಯ ಸಿದ್ದತೆಗೆ ಡಿಸಿ ಸೂಚನೆ

spot_img

ಬೆಳಗಾವಿ: ಭಾರತ ರತ್ನ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತಿ ಆಚರಣೆ ಏಪ್ರಿಲ್ 14 ರಂದು ನಡೆಯಲಿದ್ದು, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ನಡೆಸಲು ಅಧಿಕಾರಿಗಳು ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ (ಮಾ.21) ನಡೆದ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಾ. ಬಾಬಾಸಾಹೇಬ ಅಂಬೇಡ್ಕರ್ ಉದ್ಯಾನವನದಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಅಂಬೇಡ್ಕರ್ ಜಯಂತಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಡಾ.ಬಿ.ಆರ್ ಅಂಬೇಡ್ಕರ್ ಉದ್ಯಾನವನದಲ್ಲಿ ಮುಖ್ಯ ಕಾರ್ಯಕ್ರಮ ಆಯೋಜಿಸಲು ಕಾರ್ಯಕ್ರಮಕ್ಕೆ ಅವಶ್ಯವಿರುವ ಪೆಂಡಾಲ್, ವೇದಿಕೆ, ಆಸನಗಳ ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸಬೇಕು ಹಾಗೂ ಉದ್ಯಾನವನವನ್ನು ಸ್ವಚ್ಛಗೊಳಿಸಬೇಕು ಎಂದು ಹೇಳಿದರು.

ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ರಸ್ತೆಗೆ ದೀಪಾಲಂಕಾರ ಹಾಗೂ ನಗರದ ಪ್ರಮುಖ ವೃತ್ತಗಳನ್ನು ಅಲಂಕರಿಸಿ ಬ್ಯಾನರ್ ಕಟ್ಟುವ ವ್ಯವಸ್ಥೆ ಮಾಡಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಸಲು ಅಂಬೇಡ್ಕರ್ ಅವರ ಜೀವನ ಚರಿತ್ರೆ ಹಾಗೂ ಆದರ್ಶಗಳ ಬಗ್ಗೆ ಆಳವಾಗಿ ಅಧ್ಯಯನ ಮಾಡಿದ ಉಪನ್ಯಾಸಕರ ಆಯ್ಕೆ ಮಾಡಬೇಕು ಎಂದು ಅಂಬೇಡ್ಕರ್ ಸಂಘಟನೆಯ ಮುಖಂಡರಿಗೆ ತಿಳಿಸಿದರು.ಧರ್ಮವೀರ ಸಂಭಾಜಿ ವೃತ್ತದಿಂದ, ಕಿರ್ಲೋಸ್ಕರ್ ರೋಡ್ ರಾಮದೇವ ಗಲ್ಲಿ, ಖಡೆಬಜಾರ್ ಮಾರ್ಗವಾಗಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಉದ್ಯಾನವನದ ವರೆಗೆ ರೂಪಕ ವಾಹನಗಳ ಮೆರವಣಿಗೆ ಮಾಡಲಾಗುವುದು.

ಜಯಂತಿ ಆಚರಣೆ ದಿನದಂದು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಉದ್ಯಾನವನದಲ್ಲಿ ಬೆಳಿಗ್ಗೆ ಅಲ್ಪೋಪಹಾರ ಹಾಗೂ ಕುಡಿಯುವ ನೀರು, ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ಕಲಾ ಪ್ರದರ್ಶನಕ್ಕಾಗಿ ಸ್ಥಳೀಯ 10 ಉತ್ತಮ ಕಲಾ ತಂಡಗಳನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಶಾಲಾ ಕಾಲೇಜು, ಗ್ರಾಮ ಪಂಚಾಯತ ಮತ್ತು ಸಹಕಾರ ಸಂಘ ಸಂಸ್ಥೆಗಳಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಆಚರಿಸಲಾಗುವುದು. ಖಾಸಗಿ ಶಾಲಾ ಕಾಲೇಜುಗಳಲ್ಲಿ ಕೂಡ ಜಯಂತಿ ಆಚರಣೆ ಕಡ್ಡಾಯವಾಗಿರುತ್ತದೆ.

ಪ್ರತಿವರ್ಷದಂತೆ ಜಯಂತಿ ಆಚರಣೆ ದಿನದಂದು ಮಧ್ಯಪಾನ ಮಾರಾಟ ನಿಷೇಧಿಸಲಾಗುವುದು. ಜಯಂತಿ ಪ್ರಯುಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 5 ಎಸೆಸೆಲ್ಸಿ ಹಾಗೂ 5 ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.

ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ್ ಘಾಳಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಡಾ. ಉಮಾ ಸಾಲಿಗೌಡರ, ಡಿ.ಸಿ.ಪಿ ರವೀಂದ್ರ ಗಡಾದಿ ಹಾಗೂ ವಿವಿಧ ಸಂಘಟನೆ ಕಾರ್ಯಕರ್ತರು, ಸಮಾಜದ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

spot_img

Related News

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -