ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸೇರಿ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಭೂಮಿ ಪೂಜೆ ಮೂಲಕ ಚಾಲನೆಯನ್ನು ನೀಡಿದರು.
ಈ ಸಮಯದಲ್ಲಿ ಗ್ರಾಮದ ಹಿರಿಯರು, ಅಶ್ವಿನಿ ತಳವಾರ, ನಾಗೇಶ ಡೊರನ್ನವರ, ಲಕ್ಷ್ಮೀ ಸುತಾರ, ಕೇದಾರಿ ಕಣಬರ್ಕರ್, ಗಾಯಿತ್ರಿ ಪಾಟೀಲ ಹಾಗೂ ಮುಂತಾದವರು ಉಪಸ್ಥಿತರಿದ್ದರು.