ಯಾವುದೇ ಖಾತೆ ನೀಡಿದರೂ ನಿಭಾಯಿಸುವೆ ಎಂದು ಶಾಸಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತೆ. ನಾವು ಘೋಷಿಸಿರುವ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ. ವಿಪಕ್ಷಗಳು ಸ್ವಲ್ಪ ತಾಳ್ಮೆಯಿಂದ ಇರಬೇಕು. ಗೊಂದಲ ಸೃಷ್ಟಿಸುವ ಕೆಲಸವನ್ನು ವಿಪಕ್ಷಗಳು ಮಾಡಬಾರದು ಎಂದರು.