spot_img
23.5 C
Belagavi
Sunday, December 4, 2022
spot_img

ಶಾಲಾ ಮಕ್ಕಳಿಗೆ ಅಂಕಪಟ್ಟಿ ಜತೆಗೆ ಡಿಜಿಟಲ್ ಆರೋಗ್ಯ ಕಾರ್ಡ್ ವಿತರಣೆ

ಬೆಂಗಳೂರು : ಸರ್ಕಾರಿ ಶಾಲೆಗಳ ಮಕ್ಕಳಿಗೆ ವಾರ್ಷಿಕ ಅಂಕಪಟ್ಟಿ ಜೊತೆಗೆ ಡಿಜಿಟಲ್ ಆರೋಗ್ಯ ಕಾರ್ಡ್ ವಿತರಣೆಗೆ ಆರೋಗ್ಯ ಇಲಾಖೆ ಒಪ್ಪಿಗೆ ನೀಡಿದೆ ಎಂದು ಪ್ರೊ.ಎಂ.ಆರ್.ದೊರೆಸ್ವಾಮಿ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಮಕ್ಕಳ ಶಿಕ್ಷಣದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕಾಗಿದ್ದು, ಈ ಹಿನ್ನೆಲೆಯಲ್ಲಿ ಡಿಜಿಟಲ್ ಆರೋಗ್ಯ ಕಾರ್ಡ್ ವಿತರಣೆಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ 48 ಸಾವಿರ ಶಾಲೆಗಳ ಮಕ್ಕಳ ಆರೋಗ್ಯ ತಪಾಸಣೆ ಒಂದು ಇಲಾಖೆಯಿಂದ ಸಾಧ್ಯವಿಲ್ಲ. ಹೀಗಾಗಿ ಸರ್ಕಾರಿ, ಖಾಸಗಿ ವೈದ್ಯಕೀಯ ಮತ್ತು ನರ್ಸಿಂಗ್ ಕಾಲೇಜುಗಳ ಸಹಭಾಗಿತ್ವದಲ್ಲಿ ನಿರ್ವಹಿಸಲು ಕೋರಲಾಗಿದೆ.

ಪರೀಕ್ಷಾ ಫಲಿತಾಂಶ ಅಂಕಪಟ್ಟಿ ಜೊತೆಗೆ ಮಕ್ಕಳಿಗೆ ಹೆಲ್ತ್ ಕಾರ್ಡ್ ವಿತರಿಸಿದರೆ ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -