ಮಹಾನಗರ ಪಾಲಿಕೆ ಬೆಳಗಾವಿ ಮೂತಿಯಿಂದ ಪ್ರಶಿಷ್ಟ ಜಾತಿ ಮತ್ತು ಪ್ರತಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಶೇಕಡ 29 ಯೋಜನೆ ಅಡಿಯಲ್ಲಿ ಲ್ಯಾಪ್ಟಾಪ್ ವಿತರಿಸುವ ಕಾರ್ಯಕ್ರಮ ವನ್ನು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ವಿದ್ಯಾಭ್ಯಾಸಕ್ಕಾಗಿ ಲ್ಯಾಪ್ಟಾಪ್‌ಗಳನ್ನು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಆಸಿಫ ರಾಜು ಸೇಟ ಹಾಗೂ ಮಹಾಪೌರಾದ ಶೋಭಾ ಸೋಮನಾಛ್ಚ ಉಪಮಹಾಪವರಾದ ರೇಷ್ಮಾ ಪಾಟೀಲ್ ಹಾಗೂ ಆಯುಕ್ತರಾದ ಅಶೋಕ್ ಗೊಡಗುಂಡಿ ಸಮ್ಮುಖದಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಆಸಿಫ್ ರಾಜು ಸೇಟ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯ ಸರ್ಕಾರ ಹಾಗೂ ಮಹಾನಗರ ಪಾಲಿಕೆ ವತಿಯಿಂದ 24 ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಮತ್ತು ವಿದ್ಯಾಭ್ಯಾಸಕ್ಕಾಗಿ ಲ್ಯಾಪ್ಟಾಪ್ ವಿತರಿಸಲಾಗಿದೆ. ಮತ್ತು ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಗಾಗಿ ರಾಜ್ಯ ಸರ್ಕಾರ ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಹಾಪೌರಾದ
ಶೋಭಾ ಸೋಮನಾಛ್ಚ ಅವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಉಜ್ವಲ ಭವಿಷ್ಯಕ್ಕಾಗಿ ವಿದ್ಯಾಭ್ಯಾಸ ಮಾಡಬೇಕೆಂದು ಶುಭ ಹಾರೈಸಿದರು ,ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರುಗಳು ಉಪಸ್ಥಿತರಿದ್ದರು