spot_img
spot_img
spot_img
21.1 C
Belagavi
Friday, September 30, 2022
spot_img

ರುಕ್ಮಿಣಿ ನಗರಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೇಟಿ

spot_img

ಬೆಳಗಾವಿ: ರುಕ್ಮಿಣಿ ನಗರದಲ್ಲಿ ಪಾಲಿಕೆಯ ಜಾಗೆಯಲ್ಲಿ ಗುಡಿಸಲುಗಳಲ್ಲಿ ವಾಸಿಸುವ ಕುಟುಂಬಗಳ ಪಟ್ಟಿಯನ್ನು ಸಿದ್ಧಪಡಿಸಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅವರಿಗೆ ಮನೆ ನಿರ್ಮಿಸಿ ಕೊಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.ರುಕ್ಮಿಣಿ ನಗರಕ್ಕೆ ಬುಧವಾರ (ಫೆ.23) ಭೇಟಿ ನೀಡಿ ಪರಿಶೀಲಿಸಿದ ಅವರು, ಸ್ಥಳೀಯ ಜನರ ಅಹವಾಲುಗಳನ್ನು ಆಲಿಸಿದರು.

ಕುಡಿಯುವ ನೀರು ಪೂರೈಕೆ, ಸ್ವಚ್ಛತೆಗೆ ಸಂಬಂಧಿಸಿದಂತೆ ಸ್ಥಳೀಯ ನಿವಾಸಿಗಳಿಂದ ಮಾಹಿತಿಯನ್ನು ಪಡೆದುಕೊಂಡ ಅವರು, ಜನರ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮಹಾನಗರ ಪಾಲಿಕೆ ಮತ್ತು ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಸತಿ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ:

ರುಕ್ಮಿಣಿ ನಗರದಲ್ಲಿ ಪಾಲಿಕೆಯ ಜಾಗೆಯಲ್ಲಿ ಅಂದಾಜು 400 ಕುಟುಂಬಗಳು ಗುಡಿಸಲು ಕಟ್ಟಿಕೊಂಡು ವಾಸಿಸುತ್ತಿವೆ. ಈ ಕುಟುಂಬಗಳ ಪಟ್ಟಿಯನ್ನು ಸಿದ್ಧಪಡಿಸಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆಗಳನ್ನು ಒದಗಿಸಬೇಕು ಎಂದು ತಿಳಿಸಿದರು.ಕೂಡಲೇ ಸಭೆಯನ್ನು ನಡೆಸಿ ಮಾಹಿತಿಯನ್ನು ಒದಗಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಎಲ್.ಲಮಾಣಿ ಅವರು, ಪಾಲಿಕೆಯ ವತಿಯಿಂದ ಜಾಗೆಯನ್ನು ಒದಗಿಸಿದರೆ ಆದಷ್ಟು ಬೇಗನೇ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆಗಳನ್ನು ನಿರ್ಮಿಸಿ ಕೊಡಲಾಗುವುದು ಎಂದು ತಿಳಿಸಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಗಳ ಕುರಿತು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಾಹಿತಿಯನ್ನು ಪಡೆದುಕೊಂಡರು.ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ್ ಘಾಳಿ, ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶಂಭುಲಿಂಗಪ್ಪ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

spot_img

Related News

ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ಧಿಡೀರ್ ದಾಳಿ

ಬೆಂಗಳೂರು : ರಾಜ್ಯದ ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ತಂಡ ಇಂದು ಧಿಡೀರ್ ದಾಳಿ ನಡೆಸಿದೆ. ವಾಹನ ಸವಾರರಿಂದ ಹಣ ವಸೂಲಿ ದೂರುಗಳು ಕೇಳಿ ಬಂದ ಹಿನ್ನೆಲೆ ಕಲಬುರಗಿ, ಬೀದರ್...

ಸಿಮ್ ಕಾರ್ಡ್ ಪಡೆಯಲು ನಕಲಿ ದಾಖಲೆ ನೀಡಿದರೇ 1 ವರ್ಷ ಜೈಲು, 50 ಸಾವಿರ ದಂಡ

ನವದೆಹಲಿ: ಸಿಮ್ ಕಾರ್ಡ್ ಪಡೆಯಲು ನಕಲಿ ದಾಖಲೆ ನೀಡಿದರೇ ಭಾರತೀಯ ದೂರಸಂಪರ್ಕ ಮಸೂದೆ 2022 ರ ಸಿದ್ಧಪಡಿಸಿದ ಕರಡು ಪ್ರತಿಯ ಪ್ರಕಾರ, ನೀವು ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಅಥವಾ 50,000...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -