spot_img
22.9 C
Belagavi
Saturday, December 3, 2022
spot_img

ಅನಧಿಕೃತ ಗೈರು: ಇಬ್ಬರು ಪ್ರಥಮ ದರ್ಜೆ ಸಹಾಯಕರನ್ನು ವಜಾಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಳಗಾವಿ : ಪೂರ್ವಾನುಮತಿ ಇಲ್ಲದೆ ದೀರ್ಘ ಅವಧಿಯಲ್ಲಿ ಕರ್ತವ್ಯಕ್ಕೆ ಗೈರು ಹಾಜರಾಗಿ ಕರ್ತವ್ಯಲೋಪ ಎಸಗಿರುವ ಹಿನ್ನಲೆಯಲ್ಲಿ ಇಬ್ಬರು ಪ್ರಥಮ ದರ್ಜೆ ಸಹಾಯಕರನ್ನು (ಎಫ್.ಡಿ.ಎ) ಸರ್ಕಾರಿ ಸೇವೆಯಿಂದ ವಜಾಗೊಳಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಆದೇಶ ಹೊರಡಿಸಿರುತ್ತಾರೆ.

ರಾಮದುರ್ಗ ತಹಶೀಲ್ದಾರ ಕಚೇರಿಯ ಪ್ರಥಮ ದರ್ಜೆ ಸಹಾಯಕ ಸಿ. ಎನ್. ನಾಗೂರ ಹಾಗೂ ರಾಯಬಾಗ ತಹಶೀಲ್ದಾರ ಕಚೇರಿಯ ಪ್ರಥಮ ದರ್ಜೆ ಸಹಾಯಕ ಎ.ಬಿ. ಬಸರಗಿ ಅವರು ದೀರ್ಘಾವಧಿ ಕಾಲ ಅನಧಿಕೃತ ಗೈರು ಹಾಜರಿಯಾಗಿ ಕರ್ತವ್ಯ ನಿಯೋಜನೆಯ ಜವಾಬ್ದಾರಿಯನ್ನು ನಿಭಾಯಿಸದೇ ಕರ್ತವ್ಯಲೋಪ ಎಸಗಿರುವ ಆಪಾದನೆ ಸಾಬೀತಾಗಿರುತ್ತದೆ.

ಪ್ರಥಮ ದರ್ಜೆ ಸಹಾಯಕ ಸಿ.ಎನ್. ನಾಗೂರ ಅನಧಿಕೃತ ಗೈರುಹಾಜರಿ ಆಗಿರುವ ಕುರಿತು ರಾಮದುರ್ಗ ತಹಶೀಲ್ದಾರ್ ಇವರು ಕಾರಣ ಕೇಳಿ ಲಿಖಿತ ನೋಟಿಸ್ ಜಾರಿಗೊಳಿಸಿರುತ್ತಾರೆ ಆದರೂ ಸೂಕ್ತ ಕಾರಣ ಹಾಗೂ ದಾಖಲಾತಿಗಳನ್ನು ಹಾಜರುಪಡಿಸಿರುವುದಿಲ್ಲ.

ಅದೇ ರೀತಿಯಲ್ಲಿ ಪ್ರಥಮ ದರ್ಜೆ ಸಹಾಯಕ ಎ.ಬಿ. ಬಸರಗಿ ಅವರು ಲಿಖಿತ ಹೇಳಿಕೆ ಸಲ್ಲಿಸಿದ್ದು, ಕಾರಣ ಸಮಂಜಸವಾಗಿಲ್ಲ ಎಂದು ಸತ್ಯಾಸತ್ಯತೆ ಪರಿಶೀಲಿಸಿದಾಗ ನೌಕರರ ಮೇಲೆ ಇರುವ ಆಪಾದನೆಯ ಸಾಬೀತಾಗಿರುತ್ತದೆ.

ಆದಕಾರಣ ಕರ್ನಾಟಕ ನಾಗರಿಕ ಸೇವಾ ನಿಯಮಗಳು 1957ರ ನಿಯಮ 8 (viii)ರ ಮೇರೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸರ್ಕಾರಿ ಕರ್ತವ್ಯದಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -