ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (ಕೆಪಿಸಿಸಿ) ಹೊಸ ಅಧ್ಯಕ್ಷರ ನೇಮಕವಾಗಬೇಕು ಎಂದು ಬುಧವಾರ ಬೆಳಗ್ಗೆ ಆಗ್ರಹಿಸಿದ್ದ ಸಚಿವ ಸತೀಶ್ ಜಾರಕಿಹೊಳಿ, ಹೈಕಮಾಂಡ್ನಿಂದ ಖಡಕ್ ಸಂದೇಶ ಬರುತ್ತಿದ್ದಂತೆಯೇ ಯೂಟರ್ನ್ ತೆಗೆದುಕೊಂಡಿದ್ದಾರೆ. ಬುಧವಾರ ರಾತ್ರಿ ಸಾಮಾಜಿಕ ಮಾಧ್ಯಮ ಫೇಸ್ಬುಕ್ ಮೂಲಕ ಸ್ಪಷ್ಟೀಕರಣ ನೀಡಿದ ಅವರು, ತಮ್ಮ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ. ಡಿಕೆ ಶಿವಕುಮಾರ್ ಬದಲಾವಣೆಗೆ ಆಗ್ರಹಿಸಿಲ್ಲ ಎಂದು ಹೇಳಿದ್ದಾರೆ.
ಮಾಧ್ಯಮ ವರದಿಗಳ ಬಗ್ಗೆ ಗಮನಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಬೇಕು, ಡಿಕೆ ಶಿವಕುಮಾರ್ ವಿರುದ್ಧ ಸಾಹುಕಾರ್ ಸಮರ ಎಂದೆಲ್ಲ ವರದಿಗಳಾಗಿವೆ. ಹೀಗಾಗಿ ಆ ಬಗ್ಗೆ ಸ್ಪಷ್ಟೀಕರಣ ಕೊಡಬೇಕಾಗಿ ಬಂದಿದೆ ಎಂದು ಸತೀಶ್ ಜಾರಕಿಹೊಳಿ ಫೇಸ್ಬುಕ್ ಸಂದೇಶದಲ್ಲಿ ತಿಳಿಸಿದ್ದಾರೆ.
ನಾನು ಹೇಳಿದ್ದರಲ್ಲಿ ಕೆಲವು ಸತ್ಯಾಂಶಗಳಿವೆ. ಕೆಲವು ಇಲ್ಲದ ವಿಚಾರಗಳನ್ನು ವೈಭವೀಕರಿಸಲಾಗಿದೆ. ಡಿಕೆ ಶಿವಕುಮಾರ್ ಬದಲಾವಣೆ ಮಾಡಿ ಎಂದು ನಾನು ಹೇಳಿಲ್ಲ. ಪಕ್ಷದಲ್ಲಿ ಮುಂದಿನ ಸಂಘಟನೆಯ ದೃಷ್ಟಿಯಿಂದ ಕೆಲವೊಂದು ಬದಲಾವಣೆಗಳನ್ನು ಮಾಡಬೇಕೆಂದು ಸಲಹೆ ನೀಡಿದ್ದೇನಷ್ಟೆ. ಹಾಗೆಂದು ಡಿಕೆ ಶಿವಕುಮಾರ್ ಅವರನ್ನು ಬದಲಾವಣೆ ಮಾಡಿ ಎಂದು ಹೇಳಿಲ್ಲ, ಇಂದೂ ಹೇಳುತ್ತಿಲ್ಲ, ಮುಂದೆಯೂ ಹೇಳುವುದಿಲ್ಲ. ಆದರೆ, ಇವತ್ತಿನ ವೇಗದ ಸ್ಥಿತಿಯಲ್ಲಿ ನಾ ಹೇಳಿರುವುದನ್ನು ಜನ ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ. ಹೈಕಮಾಂಡ್ ನಿರ್ಧಾರ ಮಾಡಬೇಕು ಎಂದಿರುವುದನ್ನು ಹೈಲೈಟ್ ಮಾಡಬೇಕಿತ್ತು ಎಂದು ಅವರು ಹೇಳಿದರು.
ಹೈಕಮಾಂಡ್ ಮನೊವೊಲಿಸಲು ನಾನು ಮುಂದಿನ ವಾರ ದೆಹಲಿಗೆ ಹೋಗುತ್ತೇನೆ ಎಂದಿರುವುದಾಗಿ ವರದಿಯಾಗಿದೆ. ಆದರೆ ನಾನು ಹೇಳಿದ್ದು ಹಾಗಲ್ಲ. ಕರ್ನಾಟಕ ಭವನದ ಹೊಸ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ, ವೀಕ್ಷಣೆಗೆ ಹೋಗುತ್ತೇನೆ ಎಂದಿದ್ದೆ. ಅದು ತಪ್ಪಾಗಿ ವರದಿಯಾಗಿದೆ. ಇದು ಜನರಲ್ಲಿ ಗೊಂದಲಕ್ಕೆ ಕಾರಣವಾಗಿದೆ. ಪಕ್ಷದಲ್ಲಿಯೂ ಸಹಜವಾಗಿಯೇ ಕೆಲವು ಗೊಂದಲಗಳಿಗೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ.