ನವದೆಹಲಿ : ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಗಾಗಿ ಪೈಪೋಟಿ ಶುರುವಾಗಿತ್ತು, ಆದ್ರೇ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಇಂದು ಸಂಜೆ ಪರಿಷತ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳಿಗೆ ಟಿಕೆಟ್ ಕೊಡುವ ಸಂಬಂಧ ಯಾವುದೇ ಗೊಂದಲವಿಲ್ಲ. ಇಂದು ಸಂಜೆ ಅಭ್ಯರ್ಥಿಗಳು ಪಟ್ಟಿ ಪ್ರಕಟಿಸೋದಾಗಿ ಹೇಳಿದರು.