ಡಿಸಿಎಂ ಡಿಕೆ ಶಿವಕುಮಾರ್ ಅವರು ಮತ್ತೆ ಜೈಲಿಗೆ ಹೋಗುತ್ತಾರೆ ಎಂಬ ಹೆಚ್ಡಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಸಂಸದ ಡಿಕೆ ಸುರೇಶ್, ಡಿಕೆಶಿನಾ ಜೈಲಿಗೆ ಕಳುಹಿಸಿ ಅಂತಾ ಇವರೇ ಮನವಿ ಮಾಡಿರಬೇಕು. ಬಹುಶಃ ಅಮಿತ್ ಶಾಗೆ ಹೆಚ್ಡಿಕೆ ಮನವಿ ಮಾಡಿ ಬಂದಿರಬೇಕು ಎಂದಿದ್ದಾರೆ.
ಕುಮಾರಸ್ವಾಮಿ ಗೊಡ್ಡು ಬೆದರಿಕೆಗೆ ಹೆದರುವ ಜಾಯಮಾನ ನಮ್ಮದಲ್ಲ. ಇವರು ದಾಖಲೆಗಳನ್ನು ಬಿಚ್ಚಿಡುವ ಸಮಯ ಬಂದರೆ ನಾವೂ ಸಿದ್ಧ. ಇವರ ಕನಸು ನನಸಾಗುವುದಿಲ್ಲ, ಕನಸು ಕನಸಾಗಿಯೇ ಉಳಿಯುತ್ತೆ. JDS ನಾಯಕರು ಎಲ್ಲೋ ಒಂದು ಕಡೆ ಮಾನಸಿಕವಾಗಿ ಕುಗ್ಗಿದ್ದಾರೆ. ಅವರ ಆಲೋಚನೆಗಳೆಲ್ಲ ಒಂದು ಕಡೆ ಕೇಂದ್ರಿಕೃತ ಆದಂತೆ ಕಾಣುತ್ತಿದೆ. ಕಾರ್ಯಕರ್ತರು ಇವರ ನಡೆನುಡಿ ನೋಡಿ ತಮ್ಮ ದಾರಿ ನೋಡಿಕೊಳ್ಳುತ್ತಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಹೇಳುವುದು ಸುಳ್ಳಿನ ಮಹಾ ಭಾಗ ಎಂದರು.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....