ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿರುವುದರಿಂದ ಡಿ.ಕೆ. ಶಿವಕುಮಾರ್ ವಿಚಾರಣೆಗೆ ಹಾಜರಾಗಲಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಇಡ ನೋಟಿಸ್ ನೀಡಿತ್ತು. ಹೀಗಾಗಿ ಮೈಸೂರು ಕಾರ್ಯಕ್ರಮದಲ್ಲಿದ್ದ ಡಿ.ಕೆ.ಶಿವಕುಮಾರ್ ಭಾನುವಾರವೇ ಬೆಂಗಳೂರಿಗೆ ವಾಪಸ್ ಆಗಿ ದೆಹಲಿಯತ್ತ ಪ್ರಯಾಣ ಬೆಳಿಸಿದರು