spot_img
23.5 C
Belagavi
Sunday, December 4, 2022
spot_img

ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೈಡ್ ಮಾಡ್ತಾರೆ : ಡಿಕೆಶಿ 

ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್ ಕನಕಪುರ , ದೊಡ್ಡ ಆಳಹಳ್ಳಿ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ನನ್ನ ಮೇಲೆ ಇರುವ ಪ್ರಕರಣಗಳನ್ನು ಸ್ಪೀಕರ್ ತನಿಖೆಗೆ ಕೊಟ್ಟಿದ್ದಾರೆ. ನಾನು ತನಿಖೆಗೆ ಸಹಕರಿಸುತ್ತೇನೆ ಸಮಯ ಕೊಡಿ ಎಂದಿದ್ದೇನೆ.

ನನಗೆ ಮಾನಸಿಕವಾಗಿ ಹಿಂಸೆಯಾಗುತ್ತಿದೆ. ಕೇಂದ್ರ ನಮ್ಮನ್ನು ಬಹಳ ಪ್ರೀತಿ ಮಾಡುತ್ತಿದೆ, ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೈಡ್ ಮಾಡ್ತಾರೆ ಎಂದು ಸಿಬಿಐ ದಾಳಿ ಕುರಿತು ಡಿಕೆಶಿ ವ್ಯಂಗ್ಯವಾಡಿದ್ದಾರೆ.

ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ ಬುಧವಾರ ತೆರಳಿ ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -