spot_img
spot_img
spot_img
18.2 C
Belagavi
Monday, September 26, 2022
spot_img

ಶಿಕ್ಷಣ ಪಡೆಯುವ ಹಂತದಲ್ಲಿ ಬೇರೆ ವ್ಯಸನಗಳಿಗೆ ಬಲಿಯಾಗದಿರಿ : ಚನ್ನರಾಜ ಹಟ್ಟಿಹೊಳಿ

spot_img
spot_img

For Breaking News Download App

ಎಂ.ಕೆ.ಹುಬ್ಬಳ್ಳಿ : ಪಟ್ಟಣದ ಎಸ್.ಕೆ.ಇ.ಎಸ್ ಕಮೀಟಿಯ ಶ್ರೀ ಕಲ್ಮೇಶ್ವರ ಸಂಯುಕ್ತ ಪದವಿ ಪೂರ್ವ ಹಾಗೂ ಪದವಿ ಮಹಾವಿದ್ಯಾಲಯದಲ್ಲಿ ಶ್ರೀ ಗಣೇಶೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಗಣೇಶೋತ್ಸವದ ನಾಲ್ಕನೇ ದಿನದಂದು ಅಭಿನಂದನಾ ಸಮಾರಂಭಕ್ಕೆ ವಿಧಾನ ಪರಿಷತ್ತ ಚನ್ನರಾಜ ಹಟ್ಟಿಹೊಳಿ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಮಾತನಾಡಿದ ಅವರು, ಶಿಕ್ಷಣ ನಮ್ಮ ಜೀವನವನ್ನು ರೂಪಿಸುತ್ತದೆ. ಶಿಕ್ಷಣ ಪಡೆಯುವ ಹಂತದಲ್ಲಿ ಬೇರೆ ವ್ಯಸನಗಳಿಗೆ ಬಲಿಯಾಗದೆ ಶಿಕ್ಷಕರು ಮಾಡುವ ಪಾಠಗಳನ್ನು ಸರಿಯಾಗಿ ಆಲಿಸಿ, ಉತ್ತಮ ಶಿಕ್ಷಣವನ್ನು ಪಡೆದು ಸಮಾಜದ ಉತ್ತಮ ಪ್ರಜೆಗಳಾಗಿ ತಮಗೆ ಕಲಿಸಿದ ಶಿಕ್ಷಕರಿಗೆ, ತಂದೆ, ತಾಯಿ ಹಾಗು ಊರಿಗೆ ಕೀರ್ತಿ ತಂದು ಕೊಡಬೇಕು ಎಂದರು.

ದತ್ತವಾಡದ ಹೃಷಿಕೇಶಾನಂದ ಬಾಬಾಮಹಾರಾಜರು ಸಾನಿಧ್ಯ ವಹಿಸಿದರು. ಬಸಪ್ಪ ಕರವಿನಕೊಪ್ಪ ಅಧ್ಯಕ್ಷತೆ ವಹಿಸಿದರು.

ಕ.ರಾ.ಪ್ರೌ.ಶಾ.ಸ ಶಿಕ್ಷಕ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಮಪ್ಪ ಗುಗವಾಡ, ಬೆಳಗಾವಿ ಕ.ರಾ.ಪ್ರೌ.ಶಾ.ಸ ಶಿಕ್ಷಕ ಸಂಘದ ಜಿಲ್ಲಾಧ್ಯಕ್ಷ ಸಿದ್ಧನಗೌಡ ಪಾಟೀಲ, ಬೆಳಗಾವಿ ಕ.ರಾ.ಪ್ರೌ.ಶಾ.ಸ ಶಿಕ್ಷಕ ಸಂಘದ ಸಂಘಟನಾ ಕಾರ್ಯದರ್ಶಿ ಶಿವಾನಂದ ಮಳಗಲಿ, ತಾಲುಕಾ ಘಟಕದ ಅಧ್ಯಕ್ಷ ಗಜಾನಂದ ಸೋಗಲನ್ನವರ ಗಹಕಾರ್ಯದರ್ಶಿ ಶಂಕರ ಕಳಸಣ್ಣವರ ಇವರುಗಳನ್ನು ಸನ್ಮಾನಿಸಲಾಯಿತು.ಈ ವೇಳೆ ಸಂಸ್ಥೆಯ ಎಲ್ಲ ಸದಸ್ಯರು ಹಾಗು ಶಿಕ್ಷಕರು ಇದ್ದರು.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -