ಬೆಳಗಾವಿ: ಸವದತ್ತಿ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಅವರು ಆರೋಗ್ಯದಲ್ಲಿ ಏರುಪೇರು ಆಗಿದ್ದು, ತಪಾಸಣೆಗಾಗಿ ಚೆನ್ನೈಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಆನಂದ ಮಾಮನಿ ವಿಡಿಯೋ ಹೇಳಿಕೆ ಬಿಡುಗಡೆಗೊಳಿಸಿದ್ದಾರೆ.
ಮನುಷ್ಯ ಅಂದ್ಮೇಲೆ ಆರೋಗ್ಯದಲ್ಲಿ ಏರಿಳಿತವಾಗುವುದು ಸಹಜ. ಕೆಲವು ವರ್ಷಗಳಿಂದ ನನಗೆ ಮಧುಮೇಹ ಇದೆ. ಆದರೆ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ. ನನ್ನ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.
ಮನುಷ್ಯನಿಗೆ ಜೀವನದಲ್ಲಿ ಸ್ವಾಭಾವಿಕವಾಗಿ ಆರೋಗ್ಯದಲ್ಲಿ ಏರಿಳಿತ ಆಗೋದು ಸಹಜ. ಕೆಲವು ವರ್ಷಗಳಿಂದ ನನಗೆ ಮಧುಮೇಹ ಖಾಯಿಲೆ ಇದೆ. ಆದ್ರೆ, ಕೆಲ ಮಾಧ್ಯಮದಲ್ಲಿ ಬೇರೆ ಬೇರೆ ಕಾರಣ ಹೇಳಿ ಸುಳ್ಳು ವದಂತಿಗಳು ಬರುತ್ತಿದೆ. ರಾಜ್ಯದ ಜನರ ಆಶೀರ್ವಾದ ಇದೆ.
ನಾನು ಆರೋಗ್ಯವಾಗಿದ್ದೇನೆ. ಸುಳ್ಳು ವಂದತಿಗೆ ನಮ್ಮ ಕಾರ್ಯಕರ್ತರು ಕಿವಿಗೊಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.