spot_img
spot_img
spot_img
21.1 C
Belagavi
Friday, September 30, 2022
spot_img

ಡಾ.ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿಗೆ ಮೂವರು ಆಯ್ಕೆ

spot_img

ಬೆಳಗಾವಿ: 2021-22ನೇ ವರ್ಷದ ಡಾ.ಬೆಟಗೇರಿ ಕೃಷ್ಣಶರ್ಮ ವಿಮರ್ಶಾ ಸಂಶೋಧನ ಪ್ರಶಸ್ತಿಯನ್ನು ಡಾ.ಸಿ.ಎನ್.ರಾಮಚಂದ್ರ, ಡಾ.ಬೆಟಗೇರಿ ಕೃಷ್ಣಶರ್ಮ ಜಾನಪದ ಪ್ರಶಸ್ತಿಯನ್ನು ಡಾ. ಎನ್.ಆರ್. ನಾಯ್ಕ್ ಮತ್ತು ಡಾ.ಬೆಟಗೇರಿ ಕೃಷ್ಣಶರ್ಮ ಪತ್ರಕರ್ತ ಪಶಸ್ತಿಯನ್ನು ಪದ್ಮರಾಜ ದಂಡಾವತಿ ಅವರಿಗೆ ನೀಡಲು ಡಾ.ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್‍ನ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ತಿರ್ಮಾನಿಸಲಾಯಿತು.

ಪ್ರಶಸ್ತಿಯು ತಲಾ 50 ಸಾವಿರ ರೂ. ನಗದು ಮತ್ತು ಫಲಕಗಳನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಎಫ್ರೀಲ್ ತಿಂಗಳಿನಲ್ಲಿ ನಡೆಸಲಾಗುತ್ತದೆ.

ಪ್ರಶಸ್ತಿ ವಿಜೇತರಿಗೆ ಡಾ. ಬೆಟಗೇರಿ ಕೃಷ್ಣಶರ್ಮ ಟ್ರಸ್ಟಿನ ಅಧ್ಯಕ್ಷರಾದ ಪ್ರೊ. ರಾಘವೇಂದ್ರ ಪಾಟೀಲ, ಸದಸ್ಯ ಕಾರ್ಯದರ್ಶಿಗಳಾದ ವಿದ್ಯಾವತಿ ಭಜಂತ್ರಿ ಹಾಗೂ ಟ್ರಸ್ಟ್‍ನ ಎಲ್ಲ ಸದಸ್ಯರಾದ ಡಾ. ಸರಜೂ ಕಾಟ್ಕರ್, ಡಾ. ಅರವಿಂದ ಮಾಲಗತ್ತಿ, ಡಾ.ಸಿ.ಕೆ.ನಾವಲಗಿ, ಸತೀಶ ಕುಲಕರ್ಣಿ, ಪ್ರೊ. ಚಂದ್ರಶೇಖರ ವಸ್ತ್ರದ, ಡಾ. ಬಸವರಾಜ ಜಗಜಂಪಿ, ಆಶಾ ಕಡಪಟ್ಟಿ ಇವರೆಲ್ಲರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಎಂದು ಡಾ. ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್‍ನ ಅಧ್ಯಕ್ಷರಾದ ಪ್ರೊ.ರಾಘವೇಂದ್ರ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -