spot_img
spot_img
spot_img
28.1 C
Belagavi
Thursday, September 29, 2022
spot_img

ಮಾ. 17 ಮತ್ತು 18 ರಂದು ಮದ್ಯ ಮಾರಾಟ ನಿಷೇಧ : SP ಡಾ.ಬೋರಲಿಂಗಯ್ಯ ಆದೇಶ

spot_img

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮಾರ್ಚ್ 17 ರಂದು ರಾತ್ರಿ ಕಾಮದಹನ ಹಾಗೂ ಮಾರ್ಚ್ 18 ರಂದು ಹೋಳಿ ಹಬ್ಬದ ಅಚರಣೆ ನಿಮಿತ್ಯ, ಬೆಳಗಾವಿ ನಗರ ಮತ್ತು ಬೆಳಗಾವಿ ತಾಲೂಕಿನಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಿ ನಗರ ಪೊಲೀಸ್ ಆಯುಕ್ತರಾದ ಡಾ.ಬೋರಲಿಂಗಯ್ಯ ಅವರು ಆದೇಶ ಹೊರಡಿಸಿದ್ದಾರೆ.

ಮಾರ್ಚ್ 17 ರಂದು ಮಧ್ಯಾಹ್ನ 2 ಗಂಟೆಯಿAದ ಮಾರ್ಚ್ 18 ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟದ ಅಂಗಡಿಗಳು, ಬಾರ್/ರೆಸ್ಟೋರೆಂಟ್ ಗಳು, ಕ್ಲಬ್ ಗಳು ಹಾಗೂ ದಾಸ್ತಾನು ಡಿಪೋಗಳನ್ನು, ಹೊಟೇಲ್ ಗಳಲ್ಲಿರುವ ಬಾರ್ ಗಳನ್ನು ಮುಚ್ಚತಕ್ಕದ್ದು ಹಾಗೂ ಎಲ್ಲ ಅಬಕಾರಿ ಸನ್ನದು ಅಂಗಡಿಗಳನ್ನು ಮುಚ್ಚಿ ಸೀಲ್ ಹಾಕಬೇಕು.
ಪರಿಸ್ಥಿತಿ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ಅಬಕಾರಿ ಇನ್ಸ್ ಪೆಕ್ಟರ್ ಹಾಗೂ ಉಪ-ವಿಭಾಗದ ಅಬಕಾರಿ ಅಧೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(2) ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ 1963 ಕಲಂ 31 ರ ಪ್ರಕಾರ ಅವಶ್ಯಕತೆ ಕಂಡುಬಂದಲ್ಲಿ ಶಾಂತಿಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು.

ಅಬಕಾರಿ ಉಪ-ಆಯುಕ್ತರು, ಬೆಳಗಾವಿ ತಾಲೂಕು ಮತ್ತು ಉಪ ಪೊಲೀಸ್ ಆಯುಕ್ತರು(ಕಾ ಮತ್ತು ಸು), ಬೆಳಗಾವಿ ನಗರ ಹಾಗೂ ಅವರ ಅಧೀನ ಅಧಿಕಾರಿಗಳು, ಬೆಳಗಾವಿ ಹೆಚ್ಚುವರಿ ಅಬಕಾರಿ ಅಧೀಕ್ಷಕರು ಮತ್ತು ಅಬಕಾರಿ ಉಪ ಅಧೀಕ್ಷಕರು ಇವರುಗಳು ತಮ್ಮ ವ್ಯಾಪ್ತಿಯನ್ನು ಅಧಿಸೂಚನೆಯನ್ನು ಸೂಕ್ತ ರೀತಿಯಲ್ಲಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಈ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತರಾದ ಡಾ.ಬೋರಲಿಂಗಯ್ಯ ಅವರು ತಿಳಿಸಿದ್ದಾರೆ.

spot_img

Related News

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೈಡ್ ಮಾಡ್ತಾರೆ : ಡಿಕೆಶಿ 

ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -