ಬಾಗಲಕೋಟೆ :ಸಮಾಜದಲ್ಲಿರುವ ದುರ್ವ್ಯಸನಗಳ ಹಾಗೂ ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ.ಮಹಾಂತ ಶಿವಯೋಗಿಗಳು ಎಂದು ಪ್ರಾಚಾರ್ಯರಾದ ಡಾ.ಅರುಣಕುಮಾರ ಗಾಳಿ ಅವರು ಹೇಳಿದರು.
ಗುರುವಾರ ಬಾಗಲಕೋಟೆ ನವನಗರದ ಸ.ಪ್ರ.ದ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ಲಿಂಗೈಕ್ಯ ಡಾ.ಮಹಾಂತ ಶಿವಯೋಗಿಗಳವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಪೂಜ್ಯ ಡಾ.ಮಹಾಂತ ಶಿವಯೋಗಿಗಳು ವ್ಯಸನ ಮುಕ್ತ ವ್ಯಕ್ತಿ, ಕುಟುಂಬ, ಸಮಾಜ, ಗ್ರಾಮಗಳ ನಿರ್ಮಾಣ ಮಾಡುವ ಜೊತೆಗೆ ತಮ್ಮ ಜೋಳಿಗೆ ಕಾರ್ಯಕ್ರಮದಲ್ಲಿ ನಾಡಿನ ಪ್ರಖ್ಯಾತ ವೈದ್ಯರು, ಸಮಾಜ ವಿಜ್ಞಾನಿಗಳು, ಸಾಹಿತಿಗಳು, ಸಾಮಾಜಿಕ ಕಳಕಳಿಯ ಕವಿಗಳು, ಧರ್ಮ ಗುರುಗಳನ್ನು ಆಹ್ವಾನಿಸಿ ಅವರಿಂದ ಉಪನ್ಯಾಸಗಳನ್ನು ಮಾಡಿಸುವ ಮೂಲಕ ವ್ಯಸನಗಳ ಮನಪರಿವರ್ತನೆ ಮಾಡುವುದುರ ಜೊತೆಗೆ ಮಕ್ಕಳು, ವಿದ್ಯಾರ್ಥಿಗಳು, ಯುವ ಜನಾಂಗ ದುಶ್ಚಟಗಳಿಗೆ ಬಲಿಯಾದಂತೆ ಅರಿವು ಮೂಡಿಸುತ್ತಿದ್ದರು. ಇದರಿಂದಾಗಿ ಲಕ್ಷಾಂತರ ಜನರು ವ್ಯಸನಗಳಿಂದ ಮುಕ್ತರಾಗಿ ಅವರ ಕುಟುಂಬಗಳು ನೆಮ್ಮದಿಯ ಜೀವನ ಸಾಗಿಸುತ್ತಿವೆ ಮಾಡಿದ್ದರೆ ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕರು ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಪಾಲ್ಗೋಂಡಿದ್ದರು.